Breaking News

ಮೇ 4ರಿಂದ KSRTC ಬಸ್ ಸಂಚಾರ ಆರಂಭ – ಸಾರಿಗೆ ಸಚಿವ ಲಕ್ಷ್ಮಣ ಸವದಿ

Spread the love

ರಾಜ್ಯದ ವಿವಿಧ ಭಾಗಗಳಲ್ಲಿ ಸಿಕ್ಕಿಕೊಂಡಿರುವ ವಲಸಿಗ ಕಾರ್ಮಿಕರನ್ನು ತಮ್ಮ ಜಿಲ್ಲೆಗಳಿಗೆ ಕಳಿಸಲು ವಿಶೇಷ ಬಸ್​ ವ್ಯವಸ್ಥೆ ಮಾಡಲಾಗಿದೆ. ಈ ವೇಳೆ ಸಾಮಾಜಿಕ ಅಂತರ ಕಡ್ಡಯ ಪಾಲಿಸುವಂತೆ ಸೂಚನೆ ನೀಡಿದ್ದೇವೆ ಎಂದು ಹೇಳಿದರು.

ಬೆಂಗಳೂರು(ಮೇ.03): ಮೇ 4ನೇ ತಾರೀಕಿನಿಂದ ರಾಜ್ಯಾದ್ಯಂತ ಕೆಎಸ್​​ಆರ್​​ಟಿಸಿ ಬಸ್​ ಸಂಚಾರ ಶುರುವಾಗಲಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.  ಈ ಸಂಬಂಧ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಕಂಟೇನ್ಮೆಂಟ್ ಮತ್ತು ರೆಡ್ ಜೋನ್​​​ ತಾಲೂಕುಗಳನ್ನು ಹೊರತುಪಡಿಸಿ ಎಲ್ಲಾ ಜಿಲ್ಲೆಗಳಲ್ಲೂ ಬಸ್​​ ಸಂಚಾರ ಆರಂಭಿಸಲು ಸಿಎಂ ಸಮ್ಮತಿ ನೀಡಿದ್ದಾರೆ ಎಂದರು.

ಸಂವಹನ ಕೊರತೆಯಿಂದಾಗಿ ಕೆಎಸ್​​ಆರ್​​ಟಿಸಿ ದುಪ್ಪಟ್ಟು ದರ ತೆಗೆದುಕೊಂಡಿದೆ. ಪ್ರಯಾಣಿಕರ ಜನರ ಹಿತದೃಷ್ಟಿಯಿಂದ ಈಗ ಒಂದೆಡೆ ದರ ಮಾತ್ರ ತೆಗೆದುಕೊಂಡು ಕಳಿಸುವಂತೆ ಆದೇಶಿಸಿದ್ದೇನೆ. ಈ ಬಗ್ಗೆ ಯಾವುದೇ ಗೊಂಡಲ ಬೇಡ ಎಂದರು.

ಹೀಗೆ ಮುಂದುವರೆದ ಸಾರಿಗೆ ಸಚಿವ ಲಕ್ಷ್ಮಣ ಸವದಿ, ರಾಜ್ಯ ಸರ್ಕಾರ ಈಗಾಗಲೇ ಹಾಟ್​​​ಸ್ಪಾಟ್​​ಗಳನ್ನು ಗುರುತಿಸಿದೆ. ಕೊರೋನಾ ವೈರಸ್​​ ಇರುವ ತಾಲೂಕುಗಳಲ್ಲಿ ಮುಂದಿನ ಆದೇಶ ನೀಡುವವರೆಗೂ ಬಸ್​​ ಸಂಚಾರ ಇರುವುದಿಲ್ಲ. ಉಳಿದಂತೆ ಮೇ 4ರಿಂದ ಕೆಎಸ್​​ಆರ್​​ಟಿಸಿ ಬಸ್​ ಸಂಚಾರ ಶುರುವಾಗಲಿದೆ ಎಂದು ತಿಳಿಸಿದರು.

ರಾಜ್ಯದ ವಿವಿಧ ಭಾಗಗಳಲ್ಲಿ ಸಿಕ್ಕಿಕೊಂಡಿರುವ ವಲಸಿಗ ಕಾರ್ಮಿಕರನ್ನು ತಮ್ಮ ಜಿಲ್ಲೆಗಳಿಗೆ ಕಳಿಸಲು ವಿಶೇಷ ಬಸ್​ ವ್ಯವಸ್ಥೆ ಮಾಡಲಾಗಿದೆ. ಈ ವೇಳೆ ಸಾಮಾಜಿಕ ಅಂತರ ಕಡ್ಡಯ ಪಾಲಿಸುವಂತೆ ಸೂಚನೆ ನೀಡಿದ್ದೇವೆ ಎಂದು ಹೇಳಿದರು


Spread the love

About Laxminews 24x7

Check Also

“ನಮ್ಮ ರಸ್ತೆ – ವಿನ್ಯಾಸ ಕಾರ್ಯಾಗಾರ”ದ ಉದ್ಘಾಟನೆ ಮತ್ತು ಸಂಚಾರ ಪ್ರಯೋಗಾಲಯಕ್ಕೆ ಚಾಲನೆ ನೀಡಿದ ಡಿ ಕೆ ಶಿವಕುಮಾರ್

Spread the loveಬೆಂಗಳೂರು: ಸುಗಮ ಮತ್ತು ಸುರಕ್ಷಿತ ರಸ್ತೆ ಖಾತರಿ ನಿಟ್ಟಿನಲ್ಲಿ ಬಿಬಿಎಂಪಿಯು ಕೇಂದ್ರ ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ “ನಮ್ಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ