Breaking News
Home / ಜಿಲ್ಲೆ / ಸಾರಿಗೆ ಇಲಾಖೆಯಿಂದ ವಿಶೇಷವಾಗಿ ವಿನ್ಯಾಸಗೊಳಿಸಲಾದ ಮೂರು ಮೊಬೈಲ್ ಫೀವರ್ ಕ್ಲಿನಿಕ್ ಬಸ್…..

ಸಾರಿಗೆ ಇಲಾಖೆಯಿಂದ ವಿಶೇಷವಾಗಿ ವಿನ್ಯಾಸಗೊಳಿಸಲಾದ ಮೂರು ಮೊಬೈಲ್ ಫೀವರ್ ಕ್ಲಿನಿಕ್ ಬಸ್…..

Spread the love

ಸಾರಿಗೆ ಇಲಾಖೆಯಿಂದ ವಿಶೇಷವಾಗಿ ವಿನ್ಯಾಸಗೊಳಿಸಲಾದ ಮೂರು ಮೊಬೈಲ್ ಫೀವರ್ ಕ್ಲಿನಿಕ್ ಗಳನ್ನು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಇಲಾಖೆಯ ಸಚಿವರಾದ ಲಕ್ಷ್ಮಣ ಸವದಿ ಅವರು ಗುರುವಾರ (ಏ.೨೩) ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿದರು.

ಇಲ್ಲಿನ ವಿಶ್ವೇಶ್ವರಯ್ಯ ನಗರದ ಸ್ಮಾರ್ಟ್ ಸಿಟಿಯ ಕಮಾಂಡ್ ಅಂಡ್ ಕಂಟ್ರೋಲ್ ಕೇಂದ್ರದ ಬಳಿಯಲ್ಲಿ ಬಸ್ ಗಳನ್ನು ಅವರು ಹಸ್ತಾಂತರಿಸಿದರು.

ಕೋವಿಡ್-೧೯ ಹಿನ್ನೆಲೆಯಲ್ಲಿ ಲಾಕ್ ಡೌನ್ ಘೋಷಿಸಿರುವುದರಿಂದ ಸಾರ್ವಜನಿಕರಿಗೆ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ಈ ಕ್ಲಿನಿಕ್ ಗಳನ್ನು ಬಳಸಲಾಗುವುದು ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ವಿವರಿಸಿದರು.

ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ‌ಸುರೇಶ್ ಅಂಗಡಿ, ಉಪ ಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ, ವಿಧಾನಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಮಹಾಂತೇಶ ಕವಟಗಿಮಠ,
ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ್ ಕೋರೆ, ಚಿಕ್ಕೋಡಿ ಸಂಸದರಾದ ಅಣ್ಣಾಸಾಹೇಬ್ ಜೊಲ್ಲೆ, ಶಾಸಕರಾದ ಸತೀಶ್ ಜಾರಕಿಹೊಳಿ, ದುರ್ಯೋಧನ ಐಹೊಳೆ, ಮಹಾದೇವಪ್ಪ ಯಾದವಾಡ, ಅನಿಲ್ ಬೆನಕೆ, ಅಭಯ್ ಪಾಟೀಲ, ಪ್ರಾದೇಶಿಕ ಆಯುಕ್ತರಾದ ಆಮ್ಲಾನ್ ಆದಿತ್ಯ ಬಿಸ್ವಾಸ್, ಕೋವಿಡ್-೧೯ ನಿಯಂತ್ರಣಾ ಕ್ರಮಗಳ ಉಸ್ತುವಾರಿಯಾಗಿರುವ ವಾಯವ್ಯ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್, ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜೇಂದ್ರ ಕೆ.ವಿ., ಐಸಿಎಂಆರ್-ರಾಷ್ಟ್ರೀಯ ಪಾರಂಪರಿಕ ಚಿಕಿತ್ಸಾ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ದೇವಪ್ರಸಾದ ಚಟ್ಟೋಪಾಧ್ಯಾಯ,ಮತ್ತಿತರರು ಉಪಸ್ಥಿತರಿದ್ದರು.

ಪ್ರಯೋಗಾಲಯದ ನೋಡಲ್ ಅಧಿಕಾರಿಯಾಗಿರುವ ಐಸಿಎಂಆರ್-ರಾಷ್ಟ್ರೀಯ ಪಾರಂಪರಿಕ ಚಿಕಿತ್ಸಾ ವಿಜ್ಞಾನ ಸಂಸ್ಥೆ”ಯ ಉಪ ನಿರ್ದೇಶಕ ಡಾ.ಬನ್ನಪ್ಪ ಹಾಗೂ ವಿಜ್ಞಾನಿಗಳು ಕೂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
****


Spread the love

About Laxminews 24x7

Check Also

ಬೆಳಗಾವಿಯಲ್ಲಿ ಅನುಭವ ಮಂಟಪ ನಿರ್ಮಾಣ,ಸಮುದಾಯದವರ ಮತ ಸೆಳೆಯಲು ಶಾಸಕರು ಕಸರತ್ತು

Spread the loveಬೆಳಗಾವಿ: ಚುನಾವಣೆ (Election) ಸಮೀಪಿಸುತ್ತಿದ್ದಂತೆ ಸಮುದಾಯದವರ ಮತ ಸೆಳೆಯಲು ಶಾಸಕರು ಕಸರತ್ತು ನಡೆಸುತ್ತಿದ್ದಾರೆ. ಬೆಳಗಾವಿ (Belagavi) ಉತ್ತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ