Breaking News

ಅರಣ್ಯ ಸಚಿವ ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಆನಂದ್ ಸಿಂಗ್‍ಗೆ ಕೊರೊನಾ ಸೋಂಕು ದೃಢವಾಗಿದೆ.

Spread the love

ಬಳ್ಳಾರಿ: ಅರಣ್ಯ ಸಚಿವ ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಆನಂದ್ ಸಿಂಗ್‍ಗೆ ಕೊರೊನಾ ಸೋಂಕು ದೃಢವಾಗಿದೆ.

ಸಚಿವ ಆನಂದ್ ಸಿಂಗ್ ಶುಕ್ರವಾರ ಸ್ವಯಂ ಪ್ರೇರಿತರಾಗಿ ಕೋವಿಡ್ ಟೆಸ್ಟ್ ಮಾಡಿಸಿದ್ದರು. ಅದರ ವರದಿ ಶನಿವಾರ ರಾತ್ರಿ ಬಂದಿದ್ದು, ವರದಿಯಲ್ಲಿ ಆನಂದ್ ಸಿಂಗ್ ಅವರಿಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಯಾವುದೇ ರೋಗ ಲಕ್ಷಣಗಳಿಲ್ಲದೇ ಆನಂದ್ ಸಿಂಗ್ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ.

ಎ ಸಿಂಪ್ಟಮ್ಯಾಟಿಕ್ ಕೇಸ್ ಆಗಿರುವುದರಿಂದ ಆನಂದ್ ಸಿಂಗ್ ಮನೆಯಲ್ಲೇ ಚಿಕಿತ್ಸೆ ಪಡೆಯಲಿದ್ದಾರೆ. ಹೊಸಪೇಟೆ ನಿವಾಸದಲ್ಲಿ ಆನಂದ್ ಸಿಂಗ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆನಂದ್ ಸಿಂಗ್ ಆರೋಗ್ಯವಾಗಿದ್ದಾರೆ, ಪಾಸಿಟಿವ್ ಬಂದಿರುವುದು ನಿಜ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಇತ್ತೀಚೆಗೆ ಆನಂದ್ ಸಿಂಗ್ ಕೊರೊನಾ ಸೋಂಕಿತರ ವಾರ್ಡ್ ಒಳಗೆ ಹೋಗಿ ಬಂದಿದ್ದರು. ಅಲ್ಲದೇ ಅವರ ಕಾರು ಚಾಲಕನಿಗೂ ಕೊರೊನಾ ದೃಢವಾಗಿತ್ತು. ಇದರಿಂದ ಆನಂದ್ ಸಿಂಗ್‍ಗೂ ಕೊರೊನಾ ಬಂದಿದೆ ಎಂದು ಹೇಳಾಗುತ್ತಿದೆ.


Spread the love

About Laxminews 24x7

Check Also

ಬಳ್ಳಾರಿಯಲ್ಲಿ ಉತ್ಖನನ ವೇಳೆ 3,000 ವರ್ಷಗಳಷ್ಟು ಹಳೆಯ ಮಾನವನ ಪಳೆಯುಳಿಕೆ ಪತ್ತೆ

Spread the loveಬಳ್ಳಾರಿ: ಜಿಲ್ಲೆಯ ಸಿರಗುಪ್ಪ ತಾಲೂಕಿನ ತೆಕ್ಕಲಕೋಟೆ ಪಟ್ಟಣದ ಗೌಡ್ರ ಮೂಲೆ ಬೆಟ್ಟದಲ್ಲಿ ಉತ್ಖನನ ವೇಳೆ 3,000 ವರ್ಷದಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ