ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!
ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲ್ಲೂಕಿನ ಮುರಗೋಡ ಗ್ರಾಮದ ಶ್ರೀ ಹನುಮಂತ ದೇವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.
ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮುಖಂಡರಾದ ಯಸವಂತಗೌಡ ಪಾಟೀಲ, ತಿಪ್ಪಣ್ಣಾ ತಟ್ಟಿಮನಿ, ರಾಜು ಮರಮನ್ನವರ, ಪರಮಾನಂದ ತಟ್ಟಿಮನಿ, ಶಂಕರ ತೆಳಗಿ, ರಮೇಶ್ ತಟ್ಟಿಮನಿ, ಶಿವು ಕೊಟುರಗೌಡರ, ಬಸಪ್ಪಾ ಬೂದಿಹಾಳ , ಮಹೇಶ್ ಕೀವಡಿ, ಅನಿಲ್ ಪಾಟೀಲ ಹಾಗೂ ಯುವಕರು ಗ್ರಾಮದ ಹಿರಿಯರು ರೈತರು ಉಪಸ್ಥಿತರಿದ್ದರು.
ದಿನಾಂಕ 02/03/2024