Breaking News

ರಾಯ ಬಾಗ ನಲ್ಲಿ ಜರುಗಿದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಣಾ ಸಭೆ

Spread the love

ಮುಂಬರುವ ಚಿಕ್ಕೋಡಿ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಇಂದು ರಾಯಬಾಗ ಪಟ್ಟಣದಲ್ಲಿ ಜರುಗಿದ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಣಾ ಸಭೆಯನ್ನು ಸಚಿವ ಸತೀಶ್ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದರು.

ಚಿಕ್ಕೋಡಿ ಲೋಕಸಭೆ ಕ್ಷೇತ್ರವನ್ನು ಮತ್ತೆ ಕಾಂಗ್ರೆಸ್ ಪಕ್ಷದ ಮಡಿಲಿಗೆ ತೆಗೆದುಕೊಳ್ಳಲು ಇದು ಸುವರ್ಣಾವಕಾಶ ಇದ್ದು ಯಾರೇ ಅಭ್ಯರ್ಥಿಯಾಗಿ ಆಯ್ಕೆ ಯಾದರೂ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಟೊಂಕು ಕಟ್ಟಿ ಕೆಲಸ ಮಾಡಬೇಕು. ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಪಂಚ ಗ್ಯಾರಂಟಿಗಳ ಬಗ್ಗೆ ಪ್ರಚಾರ ಮಾಡುವ ಮೂಲಕ ಮತದಾರರ ಮನವೊಲಿಸಲು ಪ್ರಯತ್ನಿಸಬೇಕು ಎಂದು ತಿಳಿಸಿದರು

ಶಾಸಕರಾದ ಮಹೇಂದ್ರ ತಮ್ಮಣ್ಣವರ, ಮಾಜಿ ಶಾಸಕರುಗಳಾದ ಶ್ಯಾಮ ಘಾಟಗೆ, ಕಾಕಾಸಾಹೇಬ ಪಾಟೀಲ, ರಾಯಬಾಗ ಮತಕ್ಷೇತ್ರದ ನಾಯಕ ಮಹಾವೀರ ಮೊಹಿತೆ ಸೇರಿ ಪಕ್ಷದ ಮುಖಂಡರು ಮತ್ತು ಪ್ರಮುಖರು ಉಪಸ್ಥಿತರಿದ್ದರು.
#SatishJarkiholi #PWDMinister


Spread the love

About Laxminews 24x7

Check Also

ರಾಷ್ಟ್ರೀಯ ಹೆದ್ದಾರಿಯಲ್ಲಿ ‘ಹೈವೇ ಪೆಟ್ರೋಲ್’ ಪೊಲೀಸರ ಬಿಂದಾಸ್ ವಸೂಲಿ ದಂಧೆ* *ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಪೊಲೀಸರ ವಸೂಲಿ ದಂಧೆಗೆ ಲಾರಿ ಚಾಲಕರು ಕಂಗಾಲು*

Spread the love *ರಾಷ್ಟ್ರೀಯ ಹೆದ್ದಾರಿಯಲ್ಲಿ ‘ಹೈವೇ ಪೆಟ್ರೋಲ್’ ಪೊಲೀಸರ ಬಿಂದಾಸ್ ವಸೂಲಿ ದಂಧೆ* *ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಪೊಲೀಸರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ