Breaking News

ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ : ಗದಗದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ, ಹಲ್ಲೆ ಆರೋಪ

Spread the love

ದಗ : ಇತ್ತೀಚಿಗೆ ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಕಳೆದ ತಿಂಗಳು ಹುಬ್ಬಳ್ಳಿಯಲ್ಲಿ ನೇಹಾಳನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಕೆಲವು ದಿನಗಳ ಹಿಂದೆ ಕೊಡಗಿನಲ್ಲಿ 10ನೇ ತರಗತಿ ವಿದ್ಯಾರ್ಥಿನಿಯ ರುಂಡ ಕಡಿದು ಭೀಕರವಾಗಿ ಕೊಲೆ ಮಾಡಲಾಗಿತ್ತು.

ಇದೀಗ ಗದಗ್ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ.

ಹೌದು ಗದಗದ ಬೆಡಗೇರಿ ಪೊಲೀಸ್ ಠಾಣೆಯಲ್ಲಿ ಕಿಡಿಗೇಡಿಗಳ ಅಟ್ಟಹಾಸಕ್ಕೆ ಕುಟುಂಬ ಒಂದು ಇದೀಗ ಲೈಂಗಿಕ ಕಿರುಕುಳಕ್ಕೆ ಒಳಗಾಗಿದೆ. ಮಹಿಳೆಯನ್ನು ಸೈನಾಜ್ ಎಂದು ಹೇಳಲಾಗುತ್ತಿದ್ದು, ಆಕೆ ಸೇರಿದಂತೆ ಆಕೆಯ ಅಪ್ರಾಪ್ತ ಇಬ್ಬರು ಹೆಣ್ಣು ಮಕ್ಕಳಿಗೂ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ.

ಈ ವೇಳೆ ಕಿಡಿಗೇಡಿಗಳು ಕುಟುಂಬದ ಮೇಲೆ ಹಲ್ಲೆ ಮಾಡುತ್ತಿರುವಾಗ ನನ್ನ ಕುಟುಂಬವನ್ನು ಕಾಪಾಡಿ ಎಂದು ಮಹಿಳೆ ಕಣ್ಣೀರು ಹಾಕುತ್ತಿದ್ದಾರೆ. ಜೊತೆಗೆ ಇದನ್ನು ಪ್ರಶ್ನಿಸಿದ್ದಕ್ಕೆ ಆರೋಪಿಗಳಾದ ಲಿಯಾಕತ್, ಅಲ್ತಾಫ್ ಸೈಯದ್, ಸಮೀರ್, ರಿಯಾಜ್, ಜಾವೀದ್ ಎಂಬುವವರು ತಾಯಿ, ಪುತ್ರ ಸದ್ಧಾಂ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ. ಅಲ್ಲದೆ ಕೊಲೆ ಬೆದರಿಕೆ ಕೂಡ ಹಾಕಿದ್ದಾರೆ ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ.


Spread the love

About Laxminews 24x7

Check Also

ಕೇಂದ್ರದ ದ್ವೇಷ ರಾಜಕಾರಣ ಖಂಡಿಸಿ ಕಾಂಗ್ರೆಸ್ ನಾಯಕರಿಂದ ಸುವರ್ಣಸೌಧ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ

Spread the loveಬೆಳಗಾವಿ: ಕೇಂದ್ರ ಸರ್ಕಾರ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ