Breaking News

ರಾಜ್ಯಾದ್ಯಂತ ‘ಚಡ್ಡಿ ಸುಡುವ ಅಭಿಯಾನ’ ಆರಂಭಿಸುತ್ತೇವೆ; ವಿಪಕ್ಷ ನಾಯಕ ಸಿದ್ದರಾಮಯ್ಯ

Spread the love

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ರಾಜ್ಯದಾದ್ಯಂತ ಚಡ್ಡಿ ಸುಡುವ ಅಭಿಯಾನ ಆರಂಭಿಸುವುದಾಗಿ ಶುಕ್ರವಾರ ಹೇಳಿದ್ದಾರೆ.

ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿದ ಅವರು, ಆರ್‌ ಎಸ್.ಎಸ್‌ ನವರು ಹಿಂದೆ ಚಡ್ಡಿ ಹಾಕುತ್ತಿದ್ದರು, ಈಗ ಪ್ಯಾಂಟ್‌ ಹಾಕುತ್ತಿದ್ದಾರೆ.

ನಮ್ಮವರು ಪ್ರತಿಭಟನೆ ಸಂದರ್ಭದಲ್ಲಿ ಸಾಂಕೇತಿಕವಾಗಿ ಒಂದೇ ಒಂದು ಚಡ್ಡಿ ಸುಟ್ಟು ಹಾಕಿದ್ದಾರೆ. ಅದು ಪೊಲೀಸರಿಗೆ ಮತ್ತು ಸರ್ಕಾರಕ್ಕೆ ದೊಡ್ಡ ಅಪರಾಧವಾಗಿ ಕಂಡಿದೆ ಎಂದು ಹೇಳಿದ್ದಾರೆ.

ಅವರೇನು ಮನೆಗೆ ಬೆಂಕಿ ಹಚ್ಚುವ ಅಥವಾ ಬೆಂಕಿಯನ್ನು ಸಮಾಜ ವಿರೋಧಿ ಕೆಲಸಕ್ಕೆ ಬಳಸಿಲ್ಲ. ಇದು ಕಾನೂನು ವಿರೋಧಿ ಕೃತ್ಯ ಹೇಗಾಗುತ್ತದೆ? ಕಾನೂನು ಉಲ್ಲಂಘನೆಗಾಗಿ ಗುಂಪುಗೂಡಿರುವುದು ಹೇಗಾಗುತ್ತದೆ ? ಒಬ್ಬರೇ ಪ್ರತಿಭಟನೆ ಮಾಡುವುದಕ್ಕಾಗುತ್ತದೆಯೇ ? ಅನ್ಯಾಯದ ವಿರುದ್ಧ, ನ್ಯಾಯಕ್ಕಾಗಿ ಹೋರಾಟ ಮಾಡುವುದು ಸಂವಿಧಾನ ನಮಗೆ ಕೊಟ್ಟ ಹಕ್ಕು.ಅದು ಮೂಲಭೂತ ಹಕ್ಕು. ಪ್ರತಿಭಟನೆ ವೇಳೆ ಆರ್’ಎಸ್‌ಎಸ್ ನವರ ಚಡ್ಡಿಯನ್ನು ಸುಟ್ಟು ಹಾಕಿದ್ದಾರೆ. ಒಂದೇ ಒಂದು ಚಡ್ಡಿ ಸುಟ್ಟಿದ್ದು ಪೊಲೀಸರಿಗೆ, ಸರ್ಕಾರದವರಿಗೆ ದೊಡ್ಡ ಅಪರಾಧವಾಗಿದೆ. ಅವರೇನು ಮನೆಗೆ ಬೆಂಕಿ ಹಚ್ಚೋಕೆ ಹೋಗಿರಲಿಲ್ಲ. ಕಾಂಪೌಂಡ್ ಗೇಟ್ ತೆಗೆದು ಒಳಗೆ ಹೋಗಿದ್ದಾರೆ. ಮನೆಗೆ ಪ್ರವೇಶ ಮಾಡಿಲ್ಲ. ಆಗ ಪೊಲೀಸರು ಏನು ಮಾಡುತ್ತಿದ್ದರು? ತಡೆಯಬೇಕಿತ್ತು ಅಲ್ಲವೇ? ಎಂದು ಪ್ರಶ್ನಿಸಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ