ಹಾಸನ: ಐತಿಹಾಸಿಕ ಮಾಲೇಕಲ್ಲು ತಿರುಪತಿ ಬೆಟ್ಟದ ಬಳಿಯ ದೇವರ ವಿಗ್ರಹಗಳ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿರುವ ಪ್ರಕರಣದ ಬೆನ್ನು ಬಿದ್ದಿರುವ ಪೊಲೀಸರು ನಾಲ್ವರು ಆರೋಪಿಗಳನ್ನ ಬಂಧಿಸಿದ್ದಾರೆ.
ನಿರ್ಮಾಣ ಹಂತದಲ್ಲಿರುವ ದೇವರ ವಿಗ್ರಹಗಳನ್ನು ವಿರೂಪಗೊಳಿಸಿರುವ ಪ್ರಕರಣ ಮೇ 31 ರಂದು ಬೆಳಕಿಗೆ ಬಂದಿತ್ತು. ಬೆಟ್ಟದ ಈಜುಕೊಳ ಹಿಂಭಾಗ, ಶ್ರೀನಿವಾಸ ಕಲ್ಯಾಣ ಮ್ಯೂಸಿಯಂ ನಿರ್ಮಾಣಕ್ಕೆಂದು ಹಲವು ವಿಗ್ರಹಗಳನ್ನು ಕೆತ್ತನೆ ಮಾಡಿ ಇಡಲಾಗಿತ್ತು. ಈ ವಿಗ್ರಹಗಳನ್ನ ದುಷ್ಕರ್ಮಿಗಳು ವಿರೂಪಗೊಳಿಸಿದ್ದರು.
ಮೂವರು ಅಪ್ರಾಪ್ತರು ಸೇರಿ ಒಟ್ಟು ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿಗಾಗಿ ಬಲೆ ಬೀಸಿದ್ದಾರೆ.
Laxmi News 24×7