Breaking News

ವೈದ್ಯರ ನಿರ್ಲಕ್ಷ ಕೊರಾನ್ ಸೋಂಕಿತ ಗರ್ಭಿಣಿಗೆ ಗರ್ಭ ಪಾತ..

Spread the love

ರಾಯಚೂರು: ಕೊರೊನಾ ಸೋಂಕಿತ ಗರ್ಭಿಣಿಗೆ ಸೂಕ್ತ ಚಿಕಿತ್ಸೆ ನೀಡದ ಹಿನ್ನಲೆಯಲ್ಲಿ ತೀವ್ರ ರಕ್ತಸ್ರಾವವಾಗಿ ಮಗು ಹೊಟ್ಟೆಯಲ್ಲೇ ಮೃತಪಟ್ಟ ಘಟನೆ ರಾಯಚೂರಿನ ಕೊವಿಡ್ ಆಸ್ಪತ್ರೆಯಲ್ಲಿ ನಡೆದಿದೆ.

ಮೂರು ತಿಂಗಳ ಗರ್ಭಿಣಿ ಒಪೆಕ್ ಆಸ್ಪತ್ರೆಯ ಐಸೋಲೇಷನ್ ವಾರ್ಡ್ ನಲ್ಲಿದ್ದರು. ಸೋಮವಾರ ರಾತ್ರಿ ತೀವ್ರ ತಕ್ತಸ್ರಾವವಾಗಿ ಗರ್ಭಿಣಿ ನರಳಾಡಿದ್ದರು. ಭಾನುವಾರ ರಾತ್ರಿಯಿಂದಲೇ ರಕ್ತಸ್ರಾವವಾಗುತ್ತಿದ್ದರೂ ವೈದ್ಯರು ನಿರ್ಲಕ್ಷ್ಯ ವಹಿಸಿದ್ದಾರೆಂಬ ಆರೋಪ ಕೇಳಿಬಂದಿದೆ.

ಗರ್ಭಿಣಿಗೆ ಚಿಕಿತ್ಸೆ ನೀಡುವಂತೆ ಕೋವಿಡ್ ವಾರ್ಡ್ ನಲ್ಲಿದ್ದ ಇತರ ರೋಗಿಗಳು ನಿನ್ನೆ ಮಧ್ಯಾಹ್ನದಿಂದ ಊಟ ಬಿಟ್ಟು ಪ್ರತಿಭಟನೆ ಮಾಡಿದ್ದರು. ರೋಗಿಗಳ ಆಕ್ರೋಶಕ್ಕೆ ಮಣಿದು ಗರ್ಭಿಣಿಯನ್ನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇದೀಗ ತೀವ್ರ ರಕ್ತಸ್ರಾವದಿಂದ ಗರ್ಭಿಣಿಗೆ ಗರ್ಭಪಾತವಾಗಿದೆ.

ಸಧ್ಯ ಸೋಂಕಿತ ಮಹಿಳೆ ಚೇತರಿಸಿಕೊಳ್ಳುತ್ತಿದ್ದು ಯಾವುದೇ ಅಪಾಯವಿಲ್ಲ ಎಂದು ರಾಯಚೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಮಕೃಷ್ಣ ಮಾಹಿತಿ ನಿಡಿದ್ದಾರೆ.


Spread the love

About Laxminews 24x7

Check Also

ತುಂಗಭದ್ರಾ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ದುರ್ಮರಣ

Spread the loveರಾಯಚೂರು: ತುಂಗಭದ್ರಾ ನದಿಗೆ  ಸ್ನಾನಕ್ಕೆ ತೆರಳಿದ್ದ ನಾಲ್ವರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ  ಕೊಸಗಿ ಮಂಡಲದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ