Breaking News

ಶಾಲೆಗಳಿಗೆ ಬೇಸಿಗೆ ರಜೆ ವಿಸ್ತರಣೆ ಸಾಧ್ಯತೆ?

Spread the love

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ತಾಪಮಾನ ಮುಂದುವರಿದಿರುವ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನ ಬೇಸಿಗೆ ರಜೆಯನ್ನು ವಿಸ್ತರಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಮೇ 16 ರಿಂದ 2022 -23 ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಲಿದೆ.

ಕೊರೋನಾ ಕಾರಣದಿಂದ ಎರಡು ವರ್ಷ ಶೈಕ್ಷಣಿಕ ಅವಧಿ ವಿಳಂಬವಾಗಿದೆ.

ಈ ಬಾರಿ ಮೇ 16 ರಿಂದ ಶಾಲೆಗಳನ್ನು ಆರಂಭಿಸಲು ತೀರ್ಮಾನಿಸಲಾಗಿತ್ತು. ಆದರೆ, ಬಿಸಿಲ ಬೇಗೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಜೆ ಅವಧಿ ವಿಸ್ತರಿಸಬೇಕೆಂದು ವಿಧಾನಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ತಾಪಮಾನ ಮುಂದುವರೆದಲ್ಲಿ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಬೇಸಿಗೆ ರಜೆ ವಿಸ್ತರಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ