Breaking News

ಮಹಾರಾಷ್ಟ್ರ ಪರಿಷತ್ ಚುನಾವಣೆ: ಬಿಜೆಪಿಯ ಎಲ್ಲ ಐವರು ಅಭ್ಯರ್ಥಿಗಳಿಗೆ ಗೆಲುವು

Spread the love

ಮುಂಬೈ: ಮಹಾರಾಷ್ಟ್ರ ವಿಧಾನ ಪರಿಷತ್ತಿನ 10 ಸ್ಥಾನಗಳಿಗೆ ಸೋಮವಾರ ನಡೆದ ಚುನಾವಣೆಯಲ್ಲಿ ಬಿಜೆಪಿ ಕಣಕ್ಕಿಳಿಸಿದ ಎಲ್ಲ ಐವರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ಐದು ಸ್ಥಾನಗಳಿಗೆ ಬಿಜೆಪಿಯಿಂದ ಪ್ರವೀಣ್ ದಾರೆಕರ್, ಪ್ರೊ.

ರಾಮ್ ಶಿಂದೆ, ಉಮಾ ಖಾಪ್ರೆ, ಶ್ರೀಕಾಂತ್ ಭಾರತೀಯ ಹಾಗೂ ಪ್ರಸಾದ್ ಲಾಡ್ ಸ್ಪರ್ಧಿಸಿದ್ದರು.

ಆಡಳಿತಾರೂಢ ಮೈತ್ರಿಕೂಟ ಮಹಾ ವಿಕಾಸ್ ಅಘಾಡಿ 6 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಆದರೆ, ಐವರು ಮಾತ್ರ ಜಯಗಳಿಸಿದ್ದಾರೆ.

ಶಿವಸೇನಾದ ಇಬ್ಬರು ಅಭ್ಯರ್ಥಿಗಳು (ಸಚಿನ್ ಅಹಿರ್ ಮತ್ತು ಅಮಾಷ್ಯ ಪಡ್ವಿ) ಹಾಗೂ ಎನ್‌ಸಿಪಿಯ ಇಬ್ಬರು ಅಭ್ಯರ್ಥಿಗಳು (ರಾಮ್‌ರಾಜೆ ನಾಯಕ್ ನಿಂಬಾಳ್ಕರ್ ಹಾಗೂ ಏಕನಾಥ ಖಡ್ಸೆ) ಗೆಲುವು ಸಾಧಿಸಿದರೆ, ಕಾಂಗ್ರೆಸ್‌ನಿಂದ ಭಾಯಿ ಜಗ್‌ತಾಪ್ ವಿಜಯ ಸಾಧಿಸಿದರು.

ಬಿಜೆಪಿಯ ನಾಲ್ವರು ಅಭ್ಯರ್ಥಿಗಳು ಮೊದಲ ಪ್ರಾಶಸ್ತ್ಯದ ಮತದಲ್ಲೇ ಗೆಲುವು ಖಚಿತಪಡಿಸಿಕೊಂಡಿದ್ದರು.

ಬಿಜೆಪಿಯ ಇಬ್ಬರು ಶಾಸಕರು ಅನಾರೋಗ್ಯದಿಂದಾಗಿ ಸಹಾಯಕರ ನೆರವಿನಿಂದ ಮತ ಚಲಾಯಿಸಿದ್ದಕ್ಕೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿ, ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿತ್ತು. ಇವರ ಮತಗಳನ್ನು ತಿರಸ್ಕರಿಸುವಂತೆ ಒತ್ತಡ ಹೇರಿತ್ತು. ಇದರಿಂದ ಮತ ಎಣಿಕೆ ಎರಡು ತಾಸು ವಿಳಂಬವಾಗಿ ಶುರುವಾಯಿತು. 10 ಸ್ಥಾನಗಳಿಗೆ ಒಟ್ಟು 11 ಅಭ್ಯರ್ಥಿಗಳು ಕಣದಲ್ಲಿದ್ದರು.


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ