Breaking News

ಬೇಡಿಕೆ ಸಧ್ಯಕ್ಕೆ ಈಡೇರಿಸಲಾಗದು ಸಚಿವ ಸವದಿ ಎಂದು ಸ್ಪಷ್ಟಪಡಿಸಿದ್ದಾರೆ. ಲಕ್ಷ್ಮಣ ಸವದಿ

Spread the love

ಬೆಂಗಳೂರು: ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ ತೀವ್ರಗೊಂಡಿದ್ದು, ಈ ನಡುವೆ ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ಸಧ್ಯಕ್ಕೆ ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಸವದಿ, ಸಾರ್ವಜನಿಕರಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಸಾರಿಗೆ ಸಿಬ್ಬಂದಿಗಳ ಮನವೊಲಿಕೆ ಮಾಡಿ ಕೆಲಸಕ್ಕೆ ಹಾಜರಾಗಲು ಮನವಿ ಮಾಡಲಾಗುವುದು. ಈಗಾಗಲೇ ಅಧಿಕಾರಿಗಳ ಜೊತೆ ಒಂದು ಸುತ್ತಿನ ಸಭೆ ನಡೆದಿದೆ. ನಮ್ಮ ಹಣಕಾಸಿನ ಇತಿಮಿತಿಯೊಳಗೆ ನೌಕರರ ಬೇಡಿಕೆ ಈಡೇರಿಸಲು ಯತ್ನಿಸುತ್ತೇವೆ ಎಂದರು.

ಸಾರಿಗೆ ನೌಕರರ ಮುಷ್ಕರ, ಬಸ್ ಗಳ ಮೇಲೆ ಕಲ್ಲು ತೂರಾಟ ಇವುಗಳ ಹಿಂದೆ ಕಾಣದ ಶಕ್ತಿಗಳ ಕೈವಾಡವಿದೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕಿದೆ ಎಂದು ಹೇಳಿದರು.


Spread the love

About Laxminews 24x7

Check Also

ಘೋಡಗೇರಿ ಜಿ.ಪಂ ವ್ಯಾಪ್ತಿಯ ಹುಕ್ಕೇರಿ ವಿದ್ಯುತ್ ಸಹಕಾರ ಸಂಘದ ಪ್ರಚಾರ ಸಭೆ

Spread the loveಘೋಡಗೇರಿ ಜಿ.ಪಂ ವ್ಯಾಪ್ತಿಯ ಹುಕ್ಕೇರಿ ವಿದ್ಯುತ್ ಸಹಕಾರ ಸಂಘದ ಪ್ರಚಾರ ಸಭೆ ವಿರೋಧಿಗಳ ಸುಳ್ಳು ವದಂತಿಗಳಿಗೆ ಕಿವಿಗೋಡಬೇಡಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ