Breaking News
Home / ಜಿಲ್ಲೆ / ಬೆಳಗಾವಿ / ಅಂತರರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆದ್ದಿರುವ ಬೆಳಗಾವಿಯ ಕರಾಟೆಪಟು

ಅಂತರರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆದ್ದಿರುವ ಬೆಳಗಾವಿಯ ಕರಾಟೆಪಟು

Spread the love

ಅಂತರರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆದ್ದಿರುವ ಕರಾಟೆ ಪಟು ಕೇತನ ಕಲ್ಲಪ್ಪಾ ಫಾಟಕೆ ಬ್ಲ್ಯಾಕ್ ಬೆಲ್ಟ್ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

ಬೆಳಗಾವಿಯ ಮಂಡೋಳಿ ರಸ್ತೆಯ ಮನೋಪ್ರಭಾ ಮಂಗಲ ಕಾರ್ಯಾಲಯದಲ್ಲಿ ಇದೇ ಅಕ್ಟೋಬರ್ 23ರಂದು ಕರಾಟೆ ಬ್ಲ್ಯಾಕ್ ಬೆಲ್ಟ್ ಪರೀಕ್ಷೆ ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ 70 ಕರಾಟೆ ಪಟುಗಳು ಭಾಗಿಯಾಗಿದ್ದರು.

ಈ ವೇಳೆ ಮುಖ್ಯ ತೀರ್ಪುಗಾರರಾಗಿ ಗಜೇಂದ್ರ ಕಾಕತಿಕರ ಆಗಮಿಸಿದ್ದರು. ಕಳೆದ 9 ವರ್ಷಗಳಿಂದ ಇಲ್ಲಿ ತರಬೇತಿ ಪಡೆದು ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಪದಕಗಳನ್ನು ಗೆದ್ದಿರುವ ಪ್ರತಿಭಾವಂತ ವಿದ್ಯಾರ್ಥಿ ಕೇತನ ಫಾಟಕೆ ಇವರಿಗೆ ಬೆಳಗಾವಿ ಜಿಲ್ಲಾ ಸ್ಪೋಟ್ರ್ಸ್ ಕರಾಟೆ ಅಸೋಸಿಯೇಷನ್ ಹಾಗೂ ಇಂಡಿಯನ್ ಕರಾಟೆ ಕ್ಲಬ್ ಅಧ್ಯಕ್ಷರು ಆಗಿರುವ ಗಜೇಂದ್ರ ಕಾಕತೀಕರ ಅವರು ಬ್ಲ್ಯಾಕ್ ಬೆಲ್ಟ್ ಮತ್ತು ಪ್ರಮಾಣ ಪತ್ರ ವಿತರಿಸಿದರು.

ಕರಾಟೆ ತರಬೇತುದಾರ ಹರೀಶ್ ಸೋನಾರ ಇವರು ಕೇತನ್ ಇವರಿಗೆ ತರಬೇತಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಕರಾಟೆ ತರಬೇತುದಾರರಾದ ವಿಠ್ಠಲ ಭೋಜಗಾರ, ಪ್ರಭಾಕರ ಕಿಲ್ಲೇಕರ, ಪರಶುರಾಮ ಕಾಕತಿ, ವಿಜಯ ಸುತಾರ, ನಿಲೇಶ ಗುರಖಾ, ನತಾಶಾ ಅμÉ್ಟೀಕರ, ವಿನಾಯಕ ದಂಡಕರ, ಪರಶುರಾಮ ನೆಕಣಾರ, ಹೇಮಲತಾ ಕಾಕತೀಕರ ಉಪಸ್ಥಿತರಿದ್ದರು.


Spread the love

About Laxminews 24x7

Check Also

ಸಿದ್ದರಾಮಯ್ಯನವರೇ ಅಧಿಕಾರದಿಂದ ಇಳೀರಿ, 24 ಗಂಟೆಯಲ್ಲಿ ಕಸ್ಟಡಿಗೆ ತೆಗೆದುಕೊಳ್ಳುತ್ತೇವೆ. : ಆರ್. ಅಶೋಕ್ ಸವಾಲು

Spread the loveಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಸಿಎಂ ಸಿದ್ದರಾಮಯ್ಯ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ