Breaking News

ಯುವತಿಗೆ ಚುಡಾಯಿಸಿದ ಯುವಕನಿಗೆ ಸಹೋದರರಿಂದ ಚಾಕು ಇರಿತ

Spread the love

ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮತ್ತೆ ನೆತ್ತರು ಹರಿದಿದೆ. ಸಹೋದರಿಯನ್ನು ಚುಡಾಯಿಸಿದ ಎಂಬ ಕಾರಣಕ್ಕೆ ಅಣ್ಣಂದಿರಿಬ್ಬರು ಯುವಕನೊಬ್ಬನಿಗೆ ಚಾಕು ಇರಿದ ಘಟನೆ ಹಳೇ ಹುಬ್ಬಳ್ಳಿಯ ಧಾರವಾಡ ಕಾಲೋನಿಯಲ್ಲಿ ನಡೆದಿದೆ.

ಚಂದ್ರಶೇಖರ್ ಎಂಬಾತನೇ ತೀವ್ರವಾಗಿ ಗಾಯಗೊಂಡ ಯುವಕನಾಗಿದ್ದಾನೆ. ಈತ ಯುವತಿಯೊಬ್ಬಳಿಗೆ ಚುಡಾಯಿಸಿದ್ದ ಎನ್ನಲಾಗಿದೆ. ಇದರಿಂದ ಕೋಪಗೊಂಡ ಆಕೆಯ ಸಹೋದರರಾದ ಕಿರಣ್ ಹಾಗೂ ಅಭಿ ಎನ್ನುವವರು ಚಾಕು ಇರಿದಿದ್ದಾರೆ ಎಂದು ತಿಳಿದುಬಂದಿದೆ.

ತೀವ್ರ ಗಾಯವಾಗಿರುವ ಯುವಕನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ನೈಋತ್ಯ ರೈಲ್ವೆ ಟಿಕೆಟ್ ಪರಿಶೀಲನೆ ಪ್ರಕರಣ, ದಂಡ ಸಂಗ್ರಹದಲ್ಲಿ ಹೆಚ್ಚಳ

Spread the loveಹುಬ್ಬಳ್ಳಿ: ನೈಋತ್ಯ ರೈಲ್ವೆ ತನ್ನ ವ್ಯಾಪ್ತಿಯಾದ್ಯಂತ ಟಿಕೆಟ್ ಪರಿಶೀಲನೆ ಮತ್ತು ನಿಯಮ ಜಾರಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ ಪರಿಣಾಮವಾಗಿ, ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ