Breaking News

ಬೆಳಗಾವಿ: ಕೆಎಲ್‌ಇ ಮಹಿಳಾ ಘಟಕದಿಂದ ಐಸೊಲೇಷನ್‌ ಕೇಂದ್

Spread the love

ಬೆಳಗಾವಿ: ಕೊರೊನಾ ಸೋಂಕಿನ ವಿರುದ್ಧದ ಸಮರಕ್ಕೆ ಇಲ್ಲಿನ ಕೆಎಲ್‌ಇ ಸಂಸ್ಥೆಯ ಸ್ವಶಕ್ತಿ ಮಹಿಳಾ ಸಬಲೀಕರಣ ಘಟಕವು ಕೈ ಜೋಡಿಸಿದ್ದು, ಕೋವಿಡ್ ರೋಗಿಗಳ ಆರೈಕೆಗಾಗಿ ನಗರದ ಲಿಂಗರಾಜ ಕಾಲೇಜು ಕ್ಯಾಂಪಸ್‌ನಲ್ಲಿ ಐಸೊಲೇಷನ್‌ ಕೇಂದ್ರ ತೆರೆದಿದೆ.

‘ಜಿಲ್ಲೆಯಲ್ಲಿ ಕೋವಿಡ್ ಉಲ್ಬಣಗೊಂಡಿದ್ದು, ಆಸ್ಪತ್ರೆಗಳಲ್ಲಿ ಹಾಸಿಗೆ ಅಭಾವ ಕಾಡುತ್ತಿದೆ. ಸೋಂಕಿನ ಕಡಿಮೆ ಗುಣಲಕ್ಷಣವುಳ್ಳವರನ್ನು ಐಸೊಲೇಷನ್‌ಗೆ ಒಳಪಡಿಸಲು (ಪ್ರತ್ಯೇಕವಾಗಿ ಇರಿಸಲು) ಕೂಡ ಸಮಸ್ಯೆ ಆಗುತ್ತದೆ. ಇದನ್ನು ಮನಗಂಡು ಘಟಕವು 50 ಹಾಸಿಗೆಗಳ ಕೇಂದ್ರ ಪ್ರಾರಂಭಿಸಿದೆ’ ಎಂದು ಪ್ರಕಟಣೆ ತಿಳಿಸಿದೆ.

‘ಕೇಂದ್ರದಲ್ಲಿ ಉಳಿಯುವ ರೋಗಿಗಳು ಹಾಗೂ ಸಂಬಂಧಿಕರ ನಡುವೆ ಸಂಪರ್ಕ ಕಲ್ಪಿಸಲು ಜೂಮ್ ಆಯಪ್‌ ಬಳಸಲಾಗುತ್ತದೆ. ಎರಡು ಪ್ರತ್ಯೇಕ ಕೊಠಡಿಗಳಲ್ಲಿ ಆಯಪ್‌ ಬಳಸುವ ವ್ಯವಸ್ಥೆ ಇದೆ. ಮನೆಯವರ ಜೊತೆ ನಿತ್ಯವೂ ಮಾತನಾಡಬಹುದು. ಈ ಮೂಲಕ ರೋಗಿ ಹಾಗೂ ಅವರ ಸಂಬಂಧಿಕರ ಮಾನಸಿಕ ಸ್ಥೈರ್ಯ ಹೆಚ್ಚಿಸಲು ಯತ್ನಿಸಲಾಗುತ್ತಿದೆ. ದಾಖಲಾಗುವವರಿಗೆ ಆರೋಗ್ಯಯುತ ಹಾಗೂ ಗುಣಮಟ್ಟದ ಆಹಾರ ಪದಾರ್ಥ ನೀಡಲಾಗುವುದು. ಸ್ಥೈರ್ಯ ಕುಂದದಂತೆ ನೋಡಿಕೊಳ್ಳಲು ಯೋಗಾಸನ ಹೇಳಿಕೊಡಲಾಗುವುದು’ ಎಂದು ಮಾಹಿತಿ ನೀಡಿದೆ.

‘ತಜ್ಞ ವೈದ್ಯರಿಂದ ದಿನದ 24 ಗಂಟೆಗಳ ಕಾಲ ಆರೈಕೆ ವ್ಯವಸ್ಥೆ ಮಾಡಲಾಗುತ್ತದೆ. ಆರೋಗ್ಯ ತಪಾಸಣೆ ನಡೆಸಲಾಗುತ್ತದೆ. ಆಂಬುಲೆನ್ಸ್‌ ವ್ಯವಸ್ಥೆ ಇದೆ. ಆಮ್ಲಜನಕ ಹಾಸಿಗೆ ವ್ಯವಸ್ಥೆ ಇರುವುದಿಲ್ಲ. ಕಡಿಮೆ ಗುಣಲಕ್ಷಣಗಳು ಹೊಂದಿರುವವರನ್ನು ಮಾತ್ರವೇ ದಾಖಲಿಸಿಕೊಳ್ಳಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಮೊ: 8197671083 /9986631942 ಸಂಪರ್ಕಿಸಬಹುದು’ ಎಂದು ತಿಳಿಸಿದೆ.


Spread the love

About Laxminews 24x7

Check Also

ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್‌ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ ಭವನದಲ್ಲಿ ಆಯೋಜಿಸಲಾದ “ಬಿಲ್ಡ್ ಟೆಕ್ – 2025” ಕಟ್ಟಡ ನಿರ್ಮಾಣ

Spread the love ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್‌ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ