ಬೆಂಗಳೂರು: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ)ಯಿಂದ ಅಭಿವೃದ್ಧಿಪಡಿಸುತ್ತಿರುವ ಕೈಗಾರಿಕಾ ಪ್ರದೇಶಗಳಲ್ಲಿ ಶೇಕಡ 30ರಷ್ಟು ಜಮೀನನ್ನು ಮಧ್ಯಮ, ಸಣ್ಣ ಮತ್ತು ಅತಿಸಣ್ಣ ಕೈಗಾರಿಕೆಗಳಿಗೆ (ಎಂಎಸ್‌ಎಂಇ) ಮೀಸಲಿಡಲಾಗುವುದು ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ತಿಳಿಸಿದರು.
ಕ್ರೆಡೈ ಕರ್ನಾಟಕ ವತಿಯಿಂದ ಶನಿವಾರ ಆಯೋಜಿಸಿದ್ದ ‘ಕ್ರೆಡೈ ಜ್ಞಾನ ಸರಣಿ’ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ರಾಜ್ಯದ ಅಭಿವೃದ್ಧಿಯಲ್ಲಿ ಸಣ್ಣ ಕೈಗಾರಿಕೆಗಳ ಪಾತ್ರ ಮಹತ್ವದ್ದು. ಮಧ್ಯಮ, ಸಣ್ಣ ಮತ್ತು ಅತಿಸಣ್ಣ ಕೈಗಾರಿಕೆಗಳಿಗೆ ಹೆಚ್ಚು ಉತ್ತೇಜನ ನೀಡಲಾಗುವುದು. ಅದನ್ನು ಈ ವಲಯದ ಉದ್ಯಮಿಗಳು ಬಳಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.
‘ಕ್ಲಸ್ಟರ್’ ಅಭಿವೃದ್ಧಿ ಯೋಜನೆ ಅನುಷ್ಠಾನಕ್ಕೆ ಹೊಸ ಕೈಗಾರಿಕಾ ನೀತಿಯಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದರು.
Laxmi News 24×7