Breaking News
Home / ಜಿಲ್ಲೆ / ಕೊರೋನಾ ಭೀತಿ: ಬೆಳಗಾವಿ ಜಿಲ್ಲೆಯ 118 ಜನರ ಮೇಲೆ ತೀವ್ರ ನಿಗಾಃ, ಗಡಿ ಭಾಗಗಳಲ್ಲಿ ಕಟ್ಟೆಚ್ಚರ: ಜಿಲ್ಲಾಧಿಕಾರಿ ಬೊಮ್ಮನಹಳ್ಳಿ

ಕೊರೋನಾ ಭೀತಿ: ಬೆಳಗಾವಿ ಜಿಲ್ಲೆಯ 118 ಜನರ ಮೇಲೆ ತೀವ್ರ ನಿಗಾಃ, ಗಡಿ ಭಾಗಗಳಲ್ಲಿ ಕಟ್ಟೆಚ್ಚರ: ಜಿಲ್ಲಾಧಿಕಾರಿ ಬೊಮ್ಮನಹಳ್ಳಿ

Spread the love

ಬೆಳಗಾವಿ: ಕೊರೋನಾ ಭೀತಿ ಹಿನ್ನೆಲೆ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಪ್ರಕಟಣೆಯೊಂದನ್ನು ಬಿಡುಗಡೆ ಮಾಡಿದ್ದು ಜಿಲ್ಲೆಯಲ್ಲಿ ಕೊರೋನಾ ವೈರಸ್ ಶಂಕಿತರ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ.

ಜಿಲ್ಲೆಗೆ ವಿದೇಶದಿಂದ ಇದುವರೆಗೆ 134 ಜನರು ಆಗಮಿಸಿದ್ದು, ಅದರಲ್ಲಿ ಮೂರು ಜನರು 18 ದಿನಗಳ ಕ್ವಾರಂಟೈನ್(ಗೃಹ ನಿಗಾ) ಅವಧಿ ಪೂರ್ಣಗೊಳಿಸಿದ್ದಾರೆ. ಯಾವುದೇ ಪ್ರಕರಣದಲ್ಲೂ ಸೋಂಕು ಕಂಡುಬಂದಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟನೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು 118 ಜನರನ್ನು ಅವರವರ ಮನೆಯಲ್ಲಿಯೇ ನಿಗಾದಲ್ಲಿರಿಸಲಾಗಿದೆ. 12 ಜನರು 14 ದಿನಗಳ ಕ್ವಾರಂಟೈನ್ ಅವಧಿಯನ್ನು ಈಗಾಗಲೇ ಪೂರ್ಣಗೊಳಿಸಿದ್ದಾರೆ.

ಇದುವರೆಗೆ ಒಟ್ಟು ಇಬ್ಬರ ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗಾಗಿ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದು ವರದಿಗಾಗಿ ಕಾಯುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸುವ ಎಲ್ಲ ಪ್ರಯಾಣಿಕರ ಸ್ಕ್ರೀನಿಂಗ್ (ತಪಾಸಣೆ) ಮಾಡಲಾಗುತ್ತಿದೆ. ಅದೇ ರೀತಿ ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳಿಂದ ಆಗಮಿಸುವ ಪ್ರಯಾಣಿಕರ ಆರೋಗ್ಯವನ್ನು ಕೂಡ ರೈಲು ನಿಲ್ದಾಣದಲ್ಲಿ ಕೂಡ ತಪಾಸಣೆ ನಡೆಸಲಾಗುತ್ತಿದೆ.ಜಿಲ್ಲೆಯ ಗಡಿಯಲ್ಲಿ ಗೋವಾ ಮತ್ತು ಮಹಾರಾಷ್ಟ್ರ ದಿಂದ ಬಸ್ ನಲ್ಲಿ ಆಗಮಿಸುವ ಪ್ರಯಾಣಿಕರನ್ನು ಕೂಡ ಆರೋಗ್ಯ ಇಲಾಖೆಯ ತಂಡಗಳು ತಪಾಸಣೆ ನಡೆಸುತ್ತಿವೆ. ಬಸ್ ನಿಲ್ದಾಣದಲ್ಲೂ ತಪಾಸಣಾ ಕಾರ್ಯ ನಡೆದಿದೆ.

ಸರಕಾರಿ ಕಚೇರಿಗಳಿಗೆ ಭೇಟಿ ನೀಡುವ ಸಾರ್ವಜನಿಕರು ಹಾಗೂ ಸಿಬ್ಬಂದಿಯ ಸ್ಕ್ರೀನಿಂಗ್ ಕೂಡ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.


Spread the love

About Laxminews 24x7

Check Also

ಸರ್ಕಾರಿ ವಾಹನದಲ್ಲಿ ಬಿಜೆಪಿ ಹಣ ಸಾಗಣೆ: ದಿನೇಶ್‌ ಗುಂಡೂರಾವ್

Spread the loveಮೈಸೂರು: ‘ಬಿಜೆಪಿ ನಾಯಕರು ಸರ್ಕಾರಿ ವಾಹನಗಳಲ್ಲಿ ಕೋಟ್ಯಂತರ ರೂಪಾಯಿ ಸಾಗಿಸಿ ಹಂಚುತ್ತಿದ್ದಾರೆ. ಐಟಿ, ಇಡಿ ರಕ್ಷಣೆಯಲ್ಲೇ ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ