Breaking News

ನವಲಗುಂದ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಗುಂಡಿನ ಸದ್ದು……..

Spread the love

ಧಾರವಾಡ: ಜಿಲ್ಲೆಯ ನವಲಗುಂದ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಗುಂಡಿನ ಸದ್ದು ಮೊಳಗಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.

ಮಲ್ಲಪ್ಪ ಕರಿ ಎಂಬಾತ ಅದೇ ಗ್ರಾಮದ ಶರಣಪ್ಪ ಕಾಳೆ ಎಂಬಾತನ ಮೇಲೆ ಗುಂಡು ಹಾರಿಸಿದ್ದಾನೆ. ಇಬ್ಬರ ಮಧ್ಯೆ ಹಣದ ವಿಚಾರವಾಗಿ ಜಗಳ ನಡೆದಿತ್ತು. ಈ ಹಿನ್ನೆಲೆಯಲ್ಲಿ ಕೋಪಗೊಂಡ ಮಲ್ಲಪ್ಪ ಗುಂಡು ಹಾರಿಸಿದ್ದಾನೆ. ಶರಣಪ್ಪನ ಹೊಟ್ಟೆ ಮತ್ತು ಕೈಗೆ ಗುಂಡು ತಗುಲಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ನವಲಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ನವಲಗುಂದ ಠಾಣೆಯ ಪಿಎಸ್‍ಐ ಜಯಪಾಲ್ ಪಾಟೀಲ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ನವಲಗುಂದ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಲಿದೆ.


Spread the love

About Laxminews 24x7

Check Also

ಕೆಡಿಪಿ ಸಭೆಯಲ್ಲಿ ಸಚಿವ ಸಂತೋಷ್‌ ಲಾಡ್-ಎಂಎಲ್​ಸಿ ಎಫ್.ಎಚ್.ಜಕ್ಕಪ್ಪನವರ ನಡುವೆ ವಾಗ್ವಾದ

Spread the loveಧಾರವಾಡ : ಧಾರವಾಡದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್​ ಲಾಡ್ ನೇತೃತ್ವದಲ್ಲಿ ಮೂರನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ