Breaking News

ಶಿವರಾಜ್ ಕುಮಾರ್ ನಟನೆಯ ಬಹು ನಿರೀಕ್ಷೆಯ ‘ಭಜರಂಗಿ-2’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ

Spread the love

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ಬಹು ನಿರೀಕ್ಷೆಯ ‘ಭಜರಂಗಿ-2’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. 2ನೇ ಲಾಕ್ ಡೌನ್ ಬಳಿಕ ಬಿಡುಗಡೆ ದಿನಾಂಕ ಘೋಷಣೆ ಮಾಡಿದ ಮೊದಲ ಸಿನಿಮಾ ತಂಡ ಇದಾಗಿದೆ.

ಸ್ಯಾಂಡಲ್‌ವುಡ್‌ನಲ್ಲಿ ಸಾಲು ಸಾಲು ಸಿನಿಮಾಗಳು ಬಿಡುಗಡೆಗೆ ಸಿದ್ಧವಾಗಿವೆ. ಇದೀಗ ಹ್ಯಾಟ್ರಿಕ್ ಹೀರೋ ಸಿನಿಮಾ ರಿಲೀಸ್ ಡೇಟ್ ಬಹಿರಂಗವಾಗಿದ್ದು, ಶಿವಣ್ಣ ಅಭಿಮಾನಿಗಳು ಸಖತ್ ಥ್ರಿಲ್ ಆಗಿದ್ದಾರೆ. ಶಿವರಾಜ್ ಕುಮಾರ್ ನಟನೆಯ ‘ಭಜರಂಗಿ-2’ ಸಿನಿಮಾ ‘ಸೆಪ್ಟಂಬರ್ 10’ರಂದು ಬಿಡುಗಡೆಯಾಗಲಿದೆ ಎಂದು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಅಂದಹಾಗೆ ಸೆಪ್ಟಂಬರ್ 10 ಗಣೇಶ ಹಬ್ಬ. ಗಣೇಶ ಚತುರ್ಥಿ ದಿನವೇ ಭಜರಂಗಿ-2 ಸಿನಿಮಾ ಬಿಡುಗಡೆಯಾಗುತ್ತಿರುವುದು ಹಬ್ಬದ ಸಂಭ್ರಮವನ್ನು ಡಬಲ್ ಮಾಡಿದೆ. ‘ಭಜರಂಗಿ-2’ ಸಿನಿಮಾ ಚಿತ್ರೀಕರಣ ಮುಗಿಸಿ ಒಂದು ವರ್ಷದ ಮೇಲಾಗಿದೆ. ಕೊರೊನಾ ಕಾರಣದಿಂದ ಸಿನಿಮಾ ಬಿಡುಗಡೆ ತಡವಾಗುತ್ತಲೆ ಇತ್ತು. ಇದೀಗ ಅಧಿಕೃತವಾಗಿ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ ಮಾಡಿ ಅಭಿಮಾನಿಗಳ ಸಂತಸ ಹೆಚ್ಚಿಸಿದೆ.

ಭಜರಂಗಿ-2 ನಿರ್ದೇಶಕ ಹರ್ಷ ಸಾರಥ್ಯದಲ್ಲಿ ಮೂಡಿಬರುತ್ತಿರುವ ಸಿನಿಮಾ. ಜಯಣ್ಣ ಫಿಲ್ಮ್ಸ್ ನಿರ್ಮಾಣದಲ್ಲಿ ಸಿನಿಮಾ ಮೂಡಿಬರುತ್ತಿದೆ. ಹರ್ಷ ಮತ್ತು ಶಿವಣ್ಣ ಕಾಂಬಿನೇಷನ್ ನಲ್ಲಿ ಭಜರಂಗಿ ಮತ್ತು ವಜ್ರಕಾಯ ಸಿನಿಮಾ ಬಳಿಕ ಮೂಡಿಬರುತ್ತಿರುವ ಚಿತ್ರವಿದು. ಚಿತ್ರದಲ್ಲಿ ಶಿವಣ್ಣಗೆ ನಾಯಕಿಯಾಗಿ ಭಾವನ ಮೆನನ್ ಕಾಣಿಸಿಕೊಂಡಿದ್ದಾರೆ.

ನಟಿ ಭಾವನಾ ಟಗರು ಸಿನಿಮಾದ ಬಳಿಕ ಶಿವಣ್ಣ ಜೊತೆ ಎರಡನೇ ಬಾರಿ ನಟಿಸುತ್ತಿದ್ದಾರೆ. ಈಗಾಗಲೇ ಪೋಸ್ಟರ್ ಮತ್ತು ಟೀಸರ್ ಮೂಲಕ ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿರುವ ‘ಭಜರಂಗಿ-2’ ಹೇಗಿರಲಿದೆ ಎನ್ನುವ ಕುತೂಹಲಕ್ಕೆ ಸೆಪ್ಟಂಬರ್ 10ರಂದು ತೆರೆಬೀಳಲಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ