ಬೆಂಗಳೂರು: ಪಂಚ ಗ್ಯಾರಂಟಿಗಳಿಗೆ ಹಣ ಹೊಂದಿಸುವ ಹೊಣೆಗಾರಿಕೆಯೊಂದಿಗೆ ಸಿಎಂ ಸಿದ್ದರಾಮಯ್ಯ ಮಧ್ಯಾಹ್ನ 12 ಗಂಟೆಗೆ ತಮ್ಮ 14ನೇ ಬಜೆಟ್ ಮಂಡನೆ ಮಾಡಲಿದ್ದಾರೆ.
ಸುಮಾರು 3.30 ಲಕ್ಷ ಕೋಟಿ ಆಸುಪಾಸಿನ ಬಜೆಟ್ ಮಂಡನೆ ಮಾಡಲಿದ್ದು, ಬಹುತೇಕ ಗ್ಯಾರಂಟಿ ಕೇಂದ್ರೀಕೃತ ಬಜೆಟ್ ಆಗಿರಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೂತನ ಕಾಂಗ್ರೆಸ್ ಸರ್ಕಾರದ 2023-24 ಸಾಲಿನ ನೂತನ ಬಜೆಟ್ ಮಂಡನೆ ಮಾಡಲಿದ್ದಾರೆ. 9 ತಿಂಗಳ ಬಜೆಟ್ ಮಂಡನೆ ಮಾಡುವ ಮೂಲಕ ತಮ್ಮ 14ನೇ ಆಯವ್ಯಯ ಮಂಡಿಸಲಿದ್ದಾರೆ. ಸುಮಾರು 3.30 ಲಕ್ಷ ಕೋಟಿ ಆಸುಪಾಸಿನ ಆಯವ್ಯಯ ಮಂಡನೆ ಮಾಡಲಿದ್ದಾರೆ. ಕಳೆದ 25 ದಿನಗಳಿಂದ ಸಿಎಂ ಸಿದ್ದರಾಮಯ್ಯ ಇಲಾಖಾವಾರು ಬಜೆಟ್ ಪೂರ್ವಬಾವಿ ಸರಣಿ ಸಭೆಗಳನ್ನು ನಡೆಸಿದ್ದಾರೆ.
ಸಿದ್ದರಾಮಯ್ಯ ಅವರ ಬಜೆಟ್ ಹೆಚ್ಚಿನ ತೆರಿಗೆ ಹೊರೆ ಇಲ್ಲದೆ, ಬೊಮ್ಮಾಯಿ ಸರ್ಕಾರ ಮಂಡಿಸಿದ ಬಜೆಟ್ನ ಮರು ಹಂಚಿಕೆಗೆ ಬಹುತೇಕ ಸೀಮಿತವಾಗಿರಲಿದೆ. ಗ್ಯಾರಂಟಿಗಳಿಗೆ ಹಣ ಹೊಂದಿಸುವ ಹೊಣೆಗಾರಿಕೆಯೊಂದಿಗೆ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದಾರೆ.