Breaking News

ತಮ್ಮ 14ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ಸಿಎಂ ಸಿದ್ದರಾಮಯ್ಯ

Spread the love

ಬೆಂಗಳೂರು: ಪಂಚ ಗ್ಯಾರಂಟಿಗಳಿಗೆ ಹಣ ಹೊಂದಿಸುವ ಹೊಣೆಗಾರಿಕೆಯೊಂದಿಗೆ ಸಿಎಂ ಸಿದ್ದರಾಮಯ್ಯ ಮಧ್ಯಾಹ್ನ 12 ಗಂಟೆಗೆ ತಮ್ಮ 14ನೇ ಬಜೆಟ್ ಮಂಡನೆ ಮಾಡಲಿದ್ದಾರೆ.

ಸುಮಾರು 3.30 ಲಕ್ಷ ಕೋಟಿ ಆಸುಪಾಸಿನ ಬಜೆಟ್ ಮಂಡನೆ ಮಾಡಲಿದ್ದು, ಬಹುತೇಕ ಗ್ಯಾರಂಟಿ ಕೇಂದ್ರೀಕೃತ ಬಜೆಟ್ ಆಗಿರಲಿದೆ.

 ಮುಖ್ಯಮಂತ್ರಿ ಸಿದ್ದರಾಮಯ್ಯ ನೂತನ ಕಾಂಗ್ರೆಸ್ ಸರ್ಕಾರದ 2023-24 ಸಾಲಿನ ನೂತನ ಬಜೆಟ್ ಮಂಡನೆ ಮಾಡಲಿದ್ದಾರೆ. 9 ತಿಂಗಳ ಬಜೆಟ್ ಮಂಡನೆ ಮಾಡುವ ಮೂಲಕ ತಮ್ಮ 14ನೇ ಆಯವ್ಯಯ ಮಂಡಿಸಲಿದ್ದಾರೆ. ಸುಮಾರು 3.30 ಲಕ್ಷ ಕೋಟಿ ಆಸುಪಾಸಿನ ಆಯವ್ಯಯ ಮಂಡನೆ ಮಾಡಲಿದ್ದಾರೆ. ಕಳೆದ 25 ದಿ‌ನಗಳಿಂದ ಸಿಎಂ ಸಿದ್ದರಾಮಯ್ಯ ಇಲಾಖಾವಾರು ಬಜೆಟ್ ಪೂರ್ವಬಾವಿ ಸರಣಿ ಸಭೆಗಳನ್ನು ನಡೆಸಿದ್ದಾರೆ.

 ಸಿದ್ದರಾಮಯ್ಯ ಅವರ ಬಜೆಟ್ ಹೆಚ್ಚಿನ ತೆರಿಗೆ ಹೊರೆ ಇಲ್ಲದೆ, ಬೊಮ್ಮಾಯಿ ಸರ್ಕಾರ ಮಂಡಿಸಿದ ಬಜೆಟ್​ನ ಮರು ಹಂಚಿಕೆಗೆ ಬಹುತೇಕ ಸೀಮಿತವಾಗಿರಲಿದೆ. ಗ್ಯಾರಂಟಿಗಳಿಗೆ ಹಣ ಹೊಂದಿಸುವ ಹೊಣೆಗಾರಿಕೆಯೊಂದಿಗೆ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದಾರೆ.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ