Breaking News

ಜನವರಿ 26ರಂದ 31ರವರೆಗೆ ಜಾತ್ರೆ ಮಹೋತ್ಸವ

Spread the love

ಮೈಸೂರು: ದಕ್ಷಿಣ ಕರ್ನಾಟಕದ ಹೆಸರಾಂತ ಸುತ್ತೂರು ಜಾತ್ರೆಗೆ ದಿನಗಣನೆ ಆರಂಭವಾಗಿದೆ. ವೈವಿಧ್ಯತೆಗಳಿಂದ ಕೂಡಿರುವ ಸುತ್ತೂರು ಜಾತ್ರೆ ‌ಗ್ರಾಮೀಣ ಸೂಗಡಿನ ಅದ್ಧೂರಿ ಹಾಗೂ ಸಂಭ್ರಮದ ಜಾತ್ರೆಯಾಗಿದೆ. ಈ ಬಾರಿ ಜನವರಿ 26ರಂದ 31ರವರೆಗೆ ಜಾತ್ರೆ ಮಹೋತ್ಸವ ನಡೆಯಲಿದ್ದು, ಈ ವೈಭಯ ಜಾತ್ರೆಯ ಹಿನ್ನೆಲೆ ಏನು? ಇಲ್ಲಿದೆ ಸ್ಟೋರಿ..

ಮೈಸೂರಿನ ನಂಜನಗೂಡು ಕಪಿಲಾ ನದಿತೀರದಲ್ಲಿರುವ ಸುತ್ತೂರು ಶ್ರೀ ಕ್ಷೇತ್ರಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ಹಳೆ ಮೈಸೂರು ಭಾಗದಲ್ಲಿ ಶ್ರೀ ಆದಿಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವ ಪ್ರತಿಯೊಬ್ಬರ ಮನೆ ಮಾತು. ಆರು ದಿನಗಳ ಕಾಲ ನಡೆಯುವ ಜಾತ್ರಾ ಮಹೋತ್ಸವದಲ್ಲಿ ಕೇವಲ ಧಾರ್ಮಿಕ ಅಚರಣೆ ಅಷ್ಟೇ ಅಲ್ಲದೇ, ಆರೋಗ್ಯ ಮೇಳ, ಕೃಷಿ ಮೇಳ, ಉತ್ಪಾದಕ ಮತ್ತು ಗ್ರಾಹಕ ಮೇಳ, ಕ್ರೀಡಾ ಮೇಳ, ಸಾಂಸ್ಕ್ಕತಿಕ ಮೇಳ, ಶೈಕ್ಷಣಿಕ ಮೇಳ, ಸಾಹಿತ್ಯ ಮತ್ತು ಪುಸ್ತಕ ಮೇಳ, ಸರ್ವಧರ್ಮ ಸಮ್ಮಿಲನ, ಸಾಮೂಹಿಕ ವಿವಾಹ, ವಿವಿಧ ವಸ್ತು ಪ್ರದರ್ಶನಗಳು, ದನಗಳ ಜಾತ್ರೆ, ಜಾನಪದ ಜಾತ್ರೆ, ಕುಸ್ತಿ ಪಂದ್ಯಾವಳಿ, ನಗೆ ಉತ್ಸವ, ನಾಟಕ, ನೃತ್ಯ, ವಚನಗಾಯನ, ಸುಗಮ ಸಂಗೀತದಂತಹ ಎಲ್ಲ ರೀತಿಯ ಕಾರ್ಯಕ್ರಮಗಳು ನಡೆಯುತ್ತವೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ