Breaking News

ಕನ್ನಡ ಸಿನಿ ಕಾರ್ಮಿಕರ ನೆರವಿಗೆ ನಿಂತ ಸಾಯಿ ಕುಮಾರ್ ಸಹೋದರರು

Spread the love

ಕೊರೊನಾ ಎರಡನೇ ಅಲೆ ಭೀಕರ ಪರಿಸ್ಥಿತಿ ಎದುರಿಸಲು ಸಾಕಷ್ಟು ಮಂದಿ ನೆರವಿಗೆ ನಿಂತಿದ್ದಾರೆ. ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಕೊರೊನಾ ಲಾಕ್ ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿರುವ ಅನೇಕ ಮಂದಿಗೆ ಸಿನಿ ಸೆಲೆಬ್ರಿಟಿಗಳು ಸಹಾಯ ಹಸ್ತ ಚಾಚಿದ್ದಾರೆ.

ಕೊರೊನಾ ಲಾಕ್ ಡೌನ್‌ನಿಂದ ಸಿನಿಮಾ ಕೆಲಸಗಳು ಸ್ಥಗಿತಗೊಂಡಿದೆ. ಸಿನಿ ಕಾರ್ಮಿಕರ ಬದುಕು ಕಷ್ಟದಲ್ಲಿದೆ. ಕೆಲಸವಿಲ್ಲದೆ ಬದುಕು ಸಾಗಿಸಲು ಪರದಾಡುತ್ತಿದ್ದಾರೆ. ಕಷ್ಟದಲ್ಲಿರುವ ಸಿನಿ ಕಾರ್ಮಿಕರಿಗೆ ಅನೇಕ ಸ್ಟಾರ್ ಕಲಾವಿದರು ನೆರವು ನೀಡಿದ್ದಾರೆ. ಸುದೀಪ್, ಉಪೇಂದ್ರ, ಯಶ್, ವಿಜಯ್ ಕಿರಗಂದೂರ್, ಪುನೀತ್ ರಾಜ್ ಕುಮಾರ್, ಸೇರಿದಂತೆ ಅನೇಕ ಮಂದಿ ಸಹಾಯ ಹಸ್ತ ಚಾಚಿದ್ದಾರೆ.

ಇದೀಗ ಡೈಲಾಗ್ ಕಿಂಗ್ ಸಾಯಿಕುಮಾರ್ ಸಹೋದರರು ಕೂಡ ಸಹಾಯಕ್ಕೆ ನಿಂತಿದ್ದಾರೆ. ನಟ ರವಿಶಂಕರ್, ಅಯ್ಯಪ್ಪ ಪಿ ಶರ್ಮಾ ಕೊರೊನಾ ಸಂಕಷ್ಟದಲ್ಲಿರುವ ಕಾರ್ಮಿಕರಿಗೆ ನೆರವಾಗಿದ್ದಾರೆ. ಕರ್ನಾಟಕ ಚಲನಚಿತ್ರ ಒಕ್ಕೂಟಕ್ಕೆ 5 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಮೂಲತಃ ಕರ್ನಾಟಕದವರಲ್ಲದಿದ್ದರೂ ಕನ್ನಡದಲ್ಲಿ ಅಪಾರ ಅಭಿಮಾನಿಗಳನ್ನು ಸಂಪಾದಿಸಿರುವ ಸಾಯಿಕುಮಾರ್ ಸಹೋದರರು ಕಾರ್ಮಿಕರ ಸಹಾಯಕ್ಕೆ ಬಂದಿರುವ ಮೂಲಕ ಕನ್ನಡಿಗರ ಮೆಚ್ಚುಗೆ ಪಾತ್ರರಾಗಿದ್ದಾರೆ.

ಸಾಯಿಕುಮಾರ್ ಕೊನೆಯದಾಗಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಯುವರತ್ನ ಸಿನಿಮಾದಲ್ಲಿ ನಟಿಸಿದ್ದರು. ಇನ್ನು ಈ ಸಿನಿಮಾಗೂ ಮೊದಲು ಶ್ರೀಮುರಳಿ ನಟನೆಯ ಭರಾಟೆ ಚಿತ್ರದಲ್ಲಿ ನಟಿಸಿದ್ದರು. ವಿಶೇಷ ಎಂದರೆ ಈ ಸಿನಿಮಾದಲ್ಲಿ ಸಾಯಿಕುಮಾರ್ ಮೂವರು ಸಹೋದರರು ಕೂಡ ನಟಿಸಿದ್ದಾರೆ. ಮೊದಲು ಬಾರಿಗೆ ಸಾಯಿಕುಮಾರ್, ರವಿಶಂಕರ್ ಮತ್ತು ಅಯ್ಯಪ್ಪ ಒಂದೇ ಸಿನಿಮಾ ಮೂಲಕ ಕನ್ನಡ ಅಭಿಮಾನಿಗಳ ಮುಂದೆ ಬಂದಿದ್ದರು.

ಇನ್ನು ರವಿಶಂಕರ್ ಕೊನೆಯದಾಗಿ ದರ್ಶನ್ ನಟನೆಯ ರಾಬರ್ಟ್ ಚಿತ್ರದಲ್ಲಿ ನಟಿಸಿದ್ದರು. ಸದ್ಯ ಸುದೀಪ್ ನಟನೆಯ ಕೋಟಿಗೊಬ್ಬ-3, ತ್ರಿಬಲ್ ರೈಡಿಂಗ್ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.


Spread the love

About Laxminews 24x7

Check Also

ಫ್ರಾನ್ಸ್ ಕೈಟ್ ಉತ್ಸವದಲ್ಲಿ ಮಂಗಳೂರಿನ ಗಾಳಿಪಟ: ಫ್ರೆಂಚರ ನಾಡಿನಲ್ಲಿ ಹಾರಲಿದೆ ‘ಕುಡ್ಲದ ತೇರು

Spread the love ಮಂಗಳೂರು: ಬಾನಾಡಿಯಲ್ಲಿ ಹಕ್ಕಿಗಳಂತೆ ಹಾರಾಡುವ ಗಾಳಿಪಟ ಈಗ ಅಂತಾರಾಷ್ಟ್ರೀಯ ಹಬ್ಬವಾಗಿದೆ. ಈ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಸೆಪ್ಟಂಬರ್​ನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ