Breaking News

ಮುಂಬೈ ಉಗ್ರರ ದಾಳಿಗೆ 15 ವರ್ಷ! ಎಲ್​ಇಟಿಯನ್ನ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದ ಇಸ್ರೇಲ್

Spread the love

ವದೆಹಲಿ: ಭಾರತದ ವಾಣಿಜ್ಯ ನಗರಿ ಮುಂಬೈನಲ್ಲಿ 26/11 (Mumbai 26/11 attack) ದಾಳಿ ನಡೆದು ಇಂದಿಗೆ 15 ವರ್ಷಗಳು ಕಳೆದಿವೆ. ಈ ಕರಾಳ ದಿನದ ಸಂದರ್ಭದಲ್ಲಿ ಇಸ್ರೇಲ್ ಸರ್ಕಾರ (Isreal Government) ಮಹತ್ವದ ನಿರ್ಧಾರ ಕೈಗೊಂಡಿದೆ. ಭಾರತದ ಸ್ನೇಹಿ ರಾಷ್ಟ್ರಗಳಲ್ಲಿ ಒಂದಾಗಿರುವ ಇಸ್ರೇಲ್ ಅಧಿಕೃತವಾಗಿ ಲಷ್ಕರ್-ಎ-ತೈಬಾ (Lashkar-e-Taiba) ಸಂಘಟನೆಯನ್ನ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದೆ.

ಭಾರತದಲ್ಲಿರುವ ಇಸ್ರೇಲ್ ರಾಯಭಾರ ಕಚೇರಿ ಮಂಗಳವಾರ ಹೇಳಿಕೆಯಲ್ಲಿ ಈ ವಿಷಯವನ್ನು ಬಹಿರಂಗಪಡಿಸಿದೆ. ಈಗಾಗಲೇ ಎಲ್​ಇಟಿಯನ್ನ ಉಗ್ರ ಸಂಘಟನೆ ಎಂದು ಘೋಷಣೆ ಮಾಡುವುದಕ್ಕೆ ಇಸ್ರೇಲ್ ಸರ್ಕಾರ ಎಲ್ಲಾ ಸಿದ್ಧತೆ ನಡೆಸಿದೆ. ಭಾರತ ಸರ್ಕಾರದ ಯಾವುದೇ ಮನವಿಯನ್ನ ಸ್ವೀಕರಿಸಿದೆ ಇಸ್ರೇಲ್ ಸರ್ಕಾರ ಸ್ವತಂತ್ರವಾಗಿ ಈ ನಿರ್ಧಾರವನ್ನು ತೆಗೆದುಕೊಂಡಿರುವುದು ಗಮನಾರ್ಹ.

ಮುಂಬೈ ದಾಳಿ ಕರಾಳತೆ ಇನ್ನೂ ಹೃದಯದಲ್ಲಿ ಪ್ರತಿಧ್ವನಿಸುತ್ತಿದೆ

” ನಾವು ಲಷ್ಕರ್-ಎ-ತೊಯ್ಬಾವನ್ನು ಭಯೋತ್ಪಾದಕ ಸಂಘಟನೆಗಳ ಪಟ್ಟಿಯಲ್ಲಿ ಸೇರಿಸಿದ್ದೇವೆ. ಇದಕ್ಕಾಗಿ ಭಾರತ ಸರ್ಕಾರದಿಂದ ಯಾವುದೇ ಮನವಿ ಬಂದಿಲ್ಲವಾದರೂ ಇಸ್ರೇಲ್ ಈ ನಿರ್ಧಾರ ಕೈಗೊಂಡಿದೆ. ಇದಕ್ಕಾಗಿ ಅಗತ್ಯ ವಿಧಿವಿಧಾನಗಳನ್ನು ಪೂರ್ಣಗೊಳಿಸಿದ್ದೇವೆ. ಲಷ್ಕರ್-ಎ-ತೊಯ್ಬಾ ಭಯಾನಕ ಭಯೋತ್ಪಾದಕ ಸಂಘಟನೆಯಾಗಿದೆ. ಈ ಸಂಘಟನೆ ಭಾರತೀಯ ನಾಗರಿಕರ ಜೊತೆಗೆ ನೂರಾರು ಜನರನ್ನು ಅಪಹರಿಸಲಾಗಿದೆ. ನವೆಂಬರ್ 26, 2008 ರಂದು ಈ ಸಂಘಟನೆಯ ಭಯೋತ್ಪಾದನೆ ಇನ್ನೂ ನಮ್ಮ ಹೃದಯದಲ್ಲಿ ಪ್ರತಿಧ್ವನಿಸುತ್ತಿದೆ ” ಎಂದು ಇಸ್ರೇಲಿ ರಾಯಭಾರ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ