Breaking News

ಎಸ್‌ಎಸ್ ಎಲ್ ಸಿ ಪರೀಕ್ಷೆ ನಡೆಸಲು ಸಮ್ಮತಿಸಿದ ಹೈಕೋರ್ಟ್

Spread the love

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಸಲು ಹೈಕೋರ್ಟ್ ಸಮ್ಮತಿಸಿದೆ.

ಕೋವಿಡ್ ಹಿನ್ನೆಲೆಯಲ್ಲಿ ದ್ವೀತಿಯ ಪಿಯು ಪರೀಕ್ಷೆ ರದ್ದುಪಡಿಸಿರುವಂತೆ ಹತ್ತನೇ ತರಗತಿ ಪರೀಕ್ಷೆಗಳನ್ನೂ ಸಹ ರದ್ದುಪಡಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಮಕ್ಕಳ ಶೈಕ್ಷಣಿಕ ಭವಿಷ್ಯದ ಹಿತದೃಷ್ಟಿಯಿಂದ ಪರೀಕ್ಷೆ ನಡೆಸುವುದು ಒಳ್ಳೆಯದು ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಕೋವಿಡ್ ಸುರಕ್ಷಿತ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಪರೀಕ್ಷೆ ನಡೆಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

 

ಈ ಬಾರಿ ಎಸ್‌ಎಸ್‌ಎಲ್ ಸಿ ಪರೀಕ್ಷೆಗಳು ವಿಭಿನ್ನ ಮಾದರಿಯಲ್ಲಿ ನಡೆಯಲಿದೆ. ಮೂರು ವಿಷಯಗಳಿಗೆ ಒಂದು ಪರೀಕ್ಷೆ ಎಂಬಂತೆ ಎರಡು ದಿನ ಪರೀಕ್ಷೆ ನಡೆಸಲಾಗುತ್ತದೆ. ಜುಲೈ 19 ರಂದು ಗಣಿತ, ವಿಜ್ಞಾನ ಹಾಗೂ ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ. ಜುಲೈ 22 ರಂದು ಭಾಷಾ ವಿಷಯಗಳ ಪರೀಕ್ಷೆ ನಡೆಯಲಿದೆ.


Spread the love

About Laxminews 24x7

Check Also

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Spread the loveಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು  ಇಂದು ಭಾರತ್ ಬಂದ್‌ಗೆ  ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ