ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ಅವಧಿಯಲ್ಲಿ ನೇಮಕಗೊಂಡಿದ್ದ 10 ಹುದ್ದೆಗಳನ್ನು ರದ್ದುಪಡಿಸಲಾಗಿದೆ.
ಯಡಿಯೂರಪ್ಪ ರಾಜಕೀಯ ಕಾರ್ಯದರ್ಶಿಗಳಾಗಿದ್ದ ರೇಣುಕಾಚಾರ್ಯ, ಡಿ.ಎನ್.ಜೀವರಾಜ್, ಎನ್.ಆರ್.ಸಂತೋಷ್ ಅವರ ಹುದ್ದೆ ರದ್ದುಪಡಿಸಲಾಗಿದೆ.
ಅಲ್ಲದೇ ಶಿಕ್ಷಣ ಸುಧಾರಣಾ ಸಲಹೆಗಾರ ಪ್ರೊ.ಎಂ.ಆರ್.ದೊರೆಸ್ವಾಮಿ, ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಶಂಕರಗೌಡ ಪಾಟೀಲ್, ಯಡಿಯೂರಪ್ಪ ಕಾನೂನು ಸಲಹೆಗಾರರಾಗಿದ್ದ ಮೋಹನ್ ಲಿಂಬಿಕಾಯಿ, ಮಾಧ್ಯಮ ಸಲಹೆಗಾರ ಎನ್.ಭೃಂಗೇಶ್, ಸಿಎಂ ಇ-ಆಡಳಿತ ಸಲಹೆಗಾರ ಬೇಳೂರು ಸುದರ್ಶನ್, ಮಾಧ್ಯಮ ಸಂಯೋಜಕ ಜಿ.ಎಸ್.ಸುನೀಲ್, ಸಿಎಂ ನೀತಿ ನಿರೂಪಣೆ ಕಾರ್ಯತಂತ್ರ ಸಲಹೆಗಾರ ಪ್ರಶಾಂತ್ ಸೇರಿದಂತೆ ಒಟ್ಟು 10 ಹುದ್ದೆಗಳನ್ನು ರದ್ದುಗೊಳಿಸಿ ಡಿಪಿಎಆರ್ ನಿಂದ ಅಧಿಸೂಚನೆ ಹೊರಡಿಸಲಾಗಿದೆ.
Laxmi News 24×7