Breaking News

ಒಣಗಿಸಿದ ಜಿಂಕೆ ಮಾಂಸ ಸಾಗಿಸುತ್ತಿದ್ದ ವ್ಯಕ್ತಿ ಬಂಧನ

Spread the love

ಹನೂರು: ಒಣಗಿಸಿದ್ದ ಜಿಂಕೆ ಮಾಂಸ ಸಾಗಿಸುತ್ತಿದ್ದ ವ್ಯಕ್ತಿಯನ್ನು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಹಲಗಾಪುರ ಗಸ್ತಿನಲ್ಲಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

ಕಳ್ಳಿದೊಡ್ಡಿ ಗ್ರಾಮದ ರಾಮಾಚಾರಿ (64) ಬಂಧಿತ ಆರೋಪಿ. ಮತ್ತೊಬ್ಬ ಆರೋಪಿ ಗಾಣಿಗಮಂಗಲ ಗ್ರಾಮದ ಸಣ್ಣಪ್ಪ ಪರಾರಿಯಾಗಿದ್ದಾನೆ.

ಸಣ್ಣಪ್ಪ ಕಾವೇರಿ ವನ್ಯಜೀವಿ ವಿಭಾಗಕ್ಕೆ ಸೇರಿದ ಅರಣ್ಯ ಪ್ರದೇಶಕ್ಕೆ ಅಕ್ರಮವಾಗಿ ಪ್ರವೇಶಿಸಿ ಜಿಂಕೆಯನ್ನು ಭೇಟೆಯಾಡಿ ಅದರ ಮಾಂಸವನ್ನು ಒಣಗಿಸಿ ರಾಮಾಚಾರಿ ಎಂಬಾತನಿಗೆ ನೀಡಿದ್ದಾನೆ. ಬೈಕ್‍ನಲ್ಲಿ ಮಾಂಸ ಸಾಗಿಸುತ್ತಿದ್ದ ಖಚಿತ ಮಾಹಿತಿ ಪಡೆದ ಅರಣ್ಯ ಇಲಾಖೆಯ ಅಧಿಕಾರಿಗಳು, ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತನಿಂದ ಜಿಂಕೆ ಮಾಂಸ ಹಾಗೂ ಸಾಗಣೆಗೆ ಬಳಸಿದ್ದ ಬೈಕ್ ವಶಪಡಿಸಿಕೊಳ್ಳಲಾಗಿದೆ. ತಲೆ ಮರೆಸಿಕೊಂಡಿರುವ ಮತ್ತೊಬ್ಬ ಆರೋಪಿ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.


Spread the love

About Laxminews 24x7

Check Also

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Spread the loveಬೆಂಗಳೂರು: ರಾಜ್ಯದ ಹಲವೆಡೆ ವರುಣನ ಅಬ್ಬರ ಜೋರಾಗಿದ್ದು, ಕೊಡಗು, ಹಾಸನ ಸೇರಿದಂತೆ ಹಲವೆಡೆ ಕೆಲ ಜಿಲ್ಲೆಗಳಲ್ಲಿ ಮಳೆರಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ