ಮಂಗಳೂರು: ಮಾರ್ನಮಿಕಟ್ಟೆಯಲ್ಲಿರುವ ಪ್ರಸಿದ್ಧ ಕೊರಗಜ್ಜ ದೈವದ ಗುಡಿಯ ಮುಂಭಾಗ ಯಾರೋ ಕಿಡಿಗೇಡಿಗಳು ಕಾಂಡೋಮ್ ಹಾಕಿ ವಿಕೃತಿ ಮೆರೆದಿದ್ದಾರೆ.
ಮಂಗಳವಾರ ಬೆಳಗ್ಗೆ ಈ ಕೃತ್ಯ ಬೆಳಕಿಗೆ ಬಂದಿದ್ದು, ಸ್ಥಳೀಯರು ಮತ್ತು ಭಕ್ತರು ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ ಬಂಧಿಸುವಂತೆ ಆಗ್ರಹಿಸಿದ್ದಾರೆ.

ದುಷ್ಕರ್ಮಿಗಳು ಉಯೋಗಿಸಿದ ಕಾಂಡೋಮ್ ಅನ್ನು ದೇಗುಲದತ್ತ ಎಸೆದಿದ್ದಾರೆ.

ಕೆಲ ತಿಂಗಳ ಹಿಂದೆಯೂ ದೇವಸ್ಥಾನ ಅಪವಿತ್ರಗೊಳಿಸುವ, ಕಳವು ಮಾಡುವ ಕೃತ್ಯಗಳೂ ನಡೆದಿದ್ದವು. ಮತ್ತೆ ಅಶ್ಲೀಲ ವಸ್ತು ಎಸೆಯುವ ಮೂಲಕ ಭಕ್ತರ ಭಾವನೆಗೆ ದಕ್ಕೆ ತಂದಿದ್ದಾರೆ. ಶಾಂತಿ ಕದಡುವ ಕೃತ್ಯಕ್ಕೂ ಯತ್ನಿಸುತ್ತಿದ್ದಾರೆ. ತಕ್ಷಣ ಅಪರಾಧಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊರಗಜ್ಜ ಗುಡಿ ಮುಂಭಾಗ ಅಶ್ಲೀಲ ವಸ್ತು ಎಸೆದಿರುವ ಕೃತ್ಯ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಜಮಾಯಿಸಿದ ಭಕ್ತರು.ಈ ಕುರಿತು ಪ್ರತಿಕ್ರಿಯಿಸಿರುವ ಶಾಸಕ ವೇದವ್ಯಾಸ ಕಾಮತ್, ಧಾರ್ಮಿಕ ಕೇಂದ್ರಗಳನ್ನು ಅಪವಿತ್ರಗೊಳಿಸುವ ಯಾರೇ ಆದರೂ ಅವರ ವಿರುದ್ಧ ಕಠಿಣ ಕ್ರಮ ಜರಗಿಸಲಾಗುವುದು. ಶಾಂತಿಯುತ ಕರಾವಳಿಯನ್ನು ಇಂತಹ ಕೃತ್ಯಗಳ ಮೂಲಕ ಕೋಮುಗಲಭೆಗೆ ಪ್ರಚೋದಿಸುವ ಶಕ್ತಿಗಳನ್ನು ಹೆಡೆಮುರಿ ಕಟ್ಟಲು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
Laxmi News 24×7