ಬೆಂಗಳೂರು: ಪಿಎಸ್‌ಐ(ಪೊಲೀಸ್ ಸಬ್ ಇನ್ಸ್‌ಪೆಕ್ಟರ್) ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮಾಜಿ ಮುಖ್ಯಮಂತ್ರಿ ಮಗನ ಮೇಲೆ ದೂರು ದಾಖಲಾಗಿದೆ.
ಭ್ರಷ್ಟಾಚಾರದ ವಿರುದ್ಧ ನಾವು ಸಂಘಟನೆಯ ಪರವಾಗಿ ವಕೀಲರು ಸಿಐಡಿಗೆ ದೂರು ನೀಡಿದ್ದಾರೆ. ಹೆಸರನ್ನು ಸೂಚಿಸದೇ, ಮಾಜಿ ಮುಖ್ಯಮಂತ್ರಿ ಮಗ ಎಂದು ಆರೋಪ ಮಾಡಲಾಗಿದೆ.
ಪಿಎಸ್‌ಐ ಪರೀಕ್ಷೆ ಅಕ್ರಮದಲ್ಲಿ ಮಾಜಿ ಮುಖ್ಯಮಂತ್ರಿಯ ಪುತ್ರನ ಕೈವಾಡವಿದೆ ಎಂದು ಅಭ್ಯರ್ಥಿಗಳು ಆರೋಪಿಸುತ್ತಿದ್ದಾರೆ. ಮಗ ಕೂಡ ಈ ಹಗರಣದಲ್ಲಿ ತೊಡಗಿರುವ ಬಗ್ಗೆ ರಾಜ್ಯಾದ್ಯಂತ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಆರೋಪಿಸಿದ್ದು ಅವರನ್ನು ವಿಚಾರಣೆ ಕರೆತರಬೇಕೆಂದು ಒತ್ತಾಯಿಸುತ್ತಿದ್ದೇವೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.