Breaking News

ರಾಜಕಾರಣಿಗಳ ಚಾರಿತ್ರ್ಯ ಹರಣ ಮಾಡುವ ಪ್ರವೃತ್ತಿಗೆ ಕಡಿವಾಣ ಹಾಕಬೇಕು: ಶಾಸಕ ರಾಜುಗೌಡ!

Spread the love

ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಹಿಂದಿರುವ ವ್ಯಕ್ತಿಯ ಬಗ್ಗೆ ಸತ್ಯಾಂಶ ಹೊರ ಬರಲು ಸಿಬಿಐ ತನಿಖೆಯಾಗಬೇಕು. ಈ ಸಿಡಿ ಬಿಡುಗಡೆ ಮಾಡಲು ಯಾರು ಕೋಟ್ಯಾಂತರ ರೂಪಾಯಿ ಬಂಡವಾಳ ಹಾಕಿದ್ದಾರೆ ಎನ್ನುವ ವಿಚಾರದ ಬಗ್ಗೆಯೂ ತನಿಖೆಯಾಗಲಿ ಎಂದು ಬಿಜೆಪಿ ಶಾಸಕ ರಾಜುಗೌಡ ಹೇಳಿಕೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಶಾಸಕ, ಸದ್ಯ ಬಿಡುಗಡೆಯಾಗಿರುವ ವಿಡಿಯೋ ರಷ್ಯಾದಿಂದ ಅಪ್ ಲೋಡ್ ಆಗಿದೆ. ಅಲ್ಲಿಂದ ವಿಡಿಯೋವನ್ನು ಅಪ್ ಲೋಡ್ ಮಾಡಲು ಯಾರೋ ದೊಡ್ಡವರೇ ಬಂಡವಾಳ ಹಾಕಿದ್ದಾರೆ ಎಂಬ ಶಂಕೆ ವ್ಯಕ್ತವಾಗುತ್ತಿದೆ ಎಂದರು.

ಇದು ವ್ಯವಸ್ಥಿತ ಹನಿಟ್ರ್ಯಾಪ್ ಆಗಿರುವ ಸಾಧ್ಯತೆ ಇದೆ. ರಮೇಶ್ ಜಾರಕಿಹೊಳಿ ರಾಜಕೀಯ ಭವಿಷ್ಯವನ್ನೇ ಮಂಕಾಗಿಸಿದೆ. ಅದಕ್ಕಿಂತ ಹೆಚ್ಚಾಗಿ ಅವರ ಕುಟುಂಬ ಸಾಮಾಜಿಕವಾಗಿ ತೆಲೆ ಎತ್ತದಂತಾಗಿದೆ ಎಂದು ಬೇಸರ ಹೊರ ಹಾಕಿದರು. ರಾಜಕೀಯ ಎದುರಿಸಲಾಗದವರು ಈ ಷಡ್ಯಂತ್ರ ಮಾಡಿದ್ದಾರೆ. ಧೈರ್ಯ ಇದ್ರೆ ನೇರವಾಗಿ ಅವರನ್ನು ಎದುರಿಸಬೇಕಿತ್ತು.

ಇದರ ಹಿಂದೆ ಅನೇಕ ದೊಡ್ಡವರ ಕೈವಾಡ ಇದೆ. ಈ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸಿ ರಾಜಕಾರಣಿಗಳ ಚಾರಿತ್ರ್ಯ ಹರಣ ಮಾಡುವ ಪ್ರವೃತ್ತಿಗೆ ಕಡಿವಾಣ ಹಾಕಬೇಕು ಎಂದಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ