Breaking News

ಕಾಂಗ್ರೆಸ್ ನಿಂದಾ ಲೋಕಸಭಾ ಅಭ್ಯರ್ಥಿ ಯಾರು ?ಇದೆ 21ರಂದು ಮಹತ್ವದ ಸಭೆ:ಸತೀಶ್ ಜಾರಕಿಹೊಳಿ,

Spread the love

ಬೆಳಗಾವಿ: ಬೆಳಗಾವಿ ಲೋಕಸಭಾ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯ ಆಯ್ಕೆಯ ಕುರಿತು ನ.21ರಂದು ನಗರದ ಕಾಂಗ್ರೆಸ್ ಭವನದಲ್ಲಿ ಮಾಜಿ ಸಚಿವ ಎಂ.ಬಿ.ಪಾಟೀಲ್ ಹಾಗೂ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.

ಬೆಳಗಾವಿ ಲೋಕಸಭಾ ಮತಕ್ಷೇತ್ರಕ್ಕೆ ಯಾವ ಅಭ್ಯರ್ಥಿಯನ್ನು ಆಯ್ಕೆ ಮಾಡುವುದಕ್ಕಾಗಿ ಕೆಪಿಸಿಸಿ ಅಧÀ್ಯಕ್ಷ ಡಿ.ಕೆ ಶಿವಕುಮಾರ್ ಮಾಜಿ ಸಚಿವ ಎಂ.ಬಿ.ಪಾಟೀಲ್ ಅವರ ಅಧ್ಯಕ್ಷ ಹಾಗೂ ಶಾಸಕ, ಕೆಪಿಸಿಸಿ ಅಧ್ಯಕ್ಷ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಸಮಿತಿ ರಚಿಸಿದ್ದಾರೆ.
ಸಮಿತಿಯ ಅಧ್ಯಕ್ಷ ಎಂ.ಬಿ ಪಾಟೀಲ್, ಸಂಯೋಜಕರಾದ ಸತೀಶ್ ಜಾರಕಿಹೊಳಿ, ಸಮಿತಿಯ ಸದಸ್ಯರಾದ, ಎಲ್ ಹನುಮಂತಯ್ಯ, ವೀರಕುಮಾರ ಪಾಟೀಲ, ಹೆಚ್ ಎಂ ರೇವಣ್ಣ, ಶ್ರೀನಿವಾ ಮಾನೆ, ಅಜಯ ಕುಮಾರ್ ಸರನಾಯಕ, ಅನೀಲ ಲಾಡ್, ಜಿಎಸ್ ಪಾಟೀಲ, ಬಸವರಾಜ ಶಿವಣ್ಣವರ , ನಾಗರಾಜ ಛಬ್ಬಿ ಸೇರಿದಂತೆ ಸಮಿತಿಯ ಸದಸ್ಯರು ಹಾಗೂ ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ಶಾಸಕರು, ಪ್ರಮುಖ ಕಾಂಗ್ರೆಸ್ ನಾಯಕರು ಸಭೆಯಲ್ಲಿ ಭಾಗವಹಿಸುತ್ತಿದ್ದಾರೆ.

ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಆಕಾಂಕ್ಷೆ ಬಹಳಷ್ಟು ಜನರಿಗೆ ಇದೆ. ಆದ್ರೆ ಇನ್ನುವರೆಗೆ ಟಿಕೆಟ್‍ಗಾಗಿ ಯಾರೊಬ್ಬರೂ ಅರ್ಜಿ ಕೊಟ್ಟಿಲ್ಲ. ಮಾಜಿ ಸಚಿವ ಪ್ರಕಾಶ್ ಹುಕ್ಕೇರಿ ನಾನೂ ಆಕಾಂಕ್ಷಿಯಾಗಿದ್ದೇನೆ ಅಂತಾ ಬಹಿರಂಗವಾಗಿ ಹೇಳಿಕೊಂಡಿದ್ದಾರೆ. ಜೊತೆಗೆ ಚನ್ನರಾಜ ಹಟ್ಟಿಹೊಳಿ, ಸುನೀಲ ಹಣಮಣ್ಣವರ, ವಿನಯ ನಾವಲU್ಪಟ್ಟಿ ಸೇರಿದಂತೆ ಬಹಳಷ್ಟು ಜನ ಆಕಾಂಕ್ಷಿಗಳು ಕಾಂಗ್ರೆಸ್ ನಲ್ಲಿದ್ದಾರೆ.

ಆಯ್ಕೆ ಸಮೀತಿಯ ಮೀಟೀಂಗ್ ನಡೆಯಲಿದೆ ಈ ಸಭೆಯಲ್ಲಿ ಎಲ್ಲರ ಅಭಿಪ್ರಾಯ ಸಂಗ್ರಹ ಮಾಡಲಾಗುತ್ತದೆ. ಚುನಾವಣೆ ಘೋಷಣೆ ಆಗುವ ಮುನ್ನವೇ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಮಾಡುವ ಎಲ್ಲ ಸಾಧ್ಯತೆಗಳಿವೆ.


Spread the love

About Laxminews 24x7

Check Also

ಗೋಕಾಕ ಜಾತ್ರೆ:ದೇವಿಯರ ದರ್ಶನ ಪಡೆದ ಸಚಿವ ಸತೀಶ ಜಾರಕಿಹೊಳಿ ಹಾಗೂ ಪುತ್ರ ರಾಹುಲ್

Spread the loveಗೋಕಾಕ ಜಾತ್ರೆ:ದೇವಿಯರ ದರ್ಶನ ಪಡೆದ ಸಚಿವ ಸತೀಶ ಜಾರಕಿಹೊಳಿ ಹಾಗೂ ಪುತ್ರ ರಾಹುಲ್ ಜುಲೈ ಒಂದರಿಂದ ಆರಂಭಗೊಂಡಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ