Home / Uncategorized /  ಸತತ ಐದನೇ ದಿನ ಪೆಟ್ರೋಲ್‌ ಹಾಗೂ ಡೀಸೆಲ್‌ ದರ ಏರಿಕೆ

 ಸತತ ಐದನೇ ದಿನ ಪೆಟ್ರೋಲ್‌ ಹಾಗೂ ಡೀಸೆಲ್‌ ದರ ಏರಿಕೆ

Spread the love

ನವದೆಹಲಿ: ಸತತ ಐದನೇ ದಿನ ಪೆಟ್ರೋಲ್‌ ಹಾಗೂ ಡೀಸೆಲ್‌ ದರ ಏರಿಕೆಯಾಗಿದ್ದು, ಮುಂಬೈನಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ ₹95 ರ ಸನಿಹಕ್ಕೆ ತಲುಪಿದೆ.

ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳ ಅಧಿಸೂಚನೆ ಪ್ರಕಾರ ಶನಿವಾರ ಪೆಟ್ರೋಲ್‌ ಲೀಟರ್‌ಗೆ 30 ಪೈಸೆ ಮತ್ತು ಡೀಸೆಲ್‌ ಲೀಟರ್‌ಗೆ 36 ಪೈಸೆ ಹೆಚ್ಚಿಸಲಾಗಿದೆ.

ದೆಹಲಿಯಲ್ಲಿ ಪೆಟ್ರೋಲ್‌ ದರ ₹88.41 ಕ್ಕೆ ತಲುಪಿದ್ದರೆ, ಡೀಸೆಲ್‌ ದರ ₹78.74 ಕ್ಕೆ ಏರಿಕೆಯಾಗಿದೆ. ಮುಂಬೈಯಲ್ಲಿ ಪೆಟ್ರೋಲ್‌ ₹94.93 ಹಾಗೂ ಡೀಸೆಲ್‌ ₹85.70 ರಷ್ಟಿದೆ.

ಕಳೆದ ಒಂದು ವಾರದಲ್ಲಿ ಪೆಟ್ರೋಲ್‌ ಪ್ರತಿ ಲೀಟರ್‌ಗೆ ₹1.51 ಪೈಸೆ, ಡೀಸೆಲ್‌ ಪ್ರತಿ ಲೀಟರ್‌ಗೆ ₹1.56 ಪೈಸೆ ಹೆಚ್ಚಳವಾಗಿದೆ.

ಬೆಂಗಳೂರಿನಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್‌ಗೆ ₹91.09 ಆಗಿದ್ದು, ಡೀಸೆಲ್ ದರ ಪ್ರತಿ ಲೀಟರ್‌ಗೆ ₹83.09 ಆಗಿದೆ.

ಇಂಧನ ದರ ಏರಿಕೆ ಖಂಡಿಸಿ ಕಾಂಗ್ರೆಸ್‌ ಸೇರಿದಂತೆ ವಿರೋಧ ಪಕ್ಷಗಳು ಕೇಂದ್ರ ಸರ್ಕಾರವನ್ನು ಟೀಕಿಸಿವೆ.


Spread the love

About Laxminews 24x7

Check Also

ಮಹಿಳೆ ಮೇಲೆ ಹಲ್ಲೆ ಪ್ರಕರಣ ; ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಸಿಹಿ ತಿನ್ನಿಸಿ ಸ್ವಾಗತ

Spread the loveಬೆಳಗಾವಿ : ಕಳೆದ ಡಿಸೆಂಬರ್ ನಲ್ಲಿ ಬೆಳಗಾವಿ ಹೊರವಲಯದ ಹೊಸ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ