Breaking News

ಬಸ್ ಸಂಚಾರ ನಿಲ್ಲಿಸಿ ಪ್ರತಿಭಟನೆಗೆ ಸಹಕರಿಸಿ ಎಂದುಸಾರಿಗೆ ಇಲಾಖೆಯ ಅಧಿಕಾರಿಯ ಕಾಲಿಗೆ ಬಿದ್ದು ಕೇಳಿಕೊಂಡ ರೈತ

Spread the love

ಬೆಳಗಾವಿ : ಸರ್ಕಾರದ ರೈತ ವಿರೋಧಿ ನೀತಿಗಳ ವಿರುದ್ಧ  ಬಸ್ ಸಂಚಾರ ನಿಲ್ಲಿಸಿ ಪ್ರತಿಭಟನೆಗೆ ಸಹಕರಿಸಿ ಎಂದು ರೈತ ಮುಖಂಡನೊಬ್ಬ ಸಾರಿಗೆ ಇಲಾಖೆಯ ಅಧಿಕಾರಿಯ ಕಾಲಿಗೆ ಬಿದ್ದು ಕೇಳಿಕೊಂಡ ಘಟನೆ ನಡೆದಿದೆ.

ಸರ್ಕಾರದ ರೈತ ವಿರೋಧಿ ನೀತಿಯ ವಿರುದ್ಧ ಬಂದ್ ಗೆ ಕರೆ ನೀಡಿದ್ದೆವೆ. ಇಂತಹ ಸಂದರ್ಭದಲ್ಲಿ ಬಸ್ ಸಂಚಾರ ವ್ಯವಸ್ಥೆಯನ್ನು ನಡೆಸಿ, ಬಂದ್ ಗೆ ವಿರೋಧ ವ್ಯಕ್ತ ಪಡಿಸಿಬೇಡಿ, ಸಾರ್. ಬಸ್ ಸಂಚಾರ ನಿಲ್ಲಿಸಿ ಎಂದು ರೈತ ಮುಖಂಡ ಚೂನಪ್ಪ ಪೂಜಾರಿ, ಬೆಳಗಾವಿ ವಿಭಾಗೀಯ ನಿಯಂತ್ರಣಾಧಿಕಾರಿ ಮಹಾದೇವಪ್ಪ ಮುಂಜಿ  ಕಾಲಿಗೆ ಬಿದ್ದು ಬೇಡಿಕೊಂಡಿದ್ದಾರೆ.

ಅಂದಹಾಗೇ ಬೆಳಿಗ್ಗೆ ಸಾರಿಗೆ ಬಸ್ ನಿಲ್ದಾಣದಲ್ಲಿ ರೈತರ ಪ್ರತಿಭಟನೆ ವೇಳೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಆದ್ರೇ ರೈತರು ಬಸ್ ನಿಲ್ದಾಣದಿಂದ ತೆರಳಿದ ನಂತ್ರ ಮತ್ತೆ ಬಸ್ ಸಂಚಾರ ಆರಂಭಿಸಲಾಗಿತ್ತು. ಹೀಗಾಗಿ ಮತ್ತೆ ಬಸ್ ನಿಲ್ದಾಣಕ್ಕೆ ಬಂದು ಸಾರಿಗೆ ಅಧಿಕಾರಿಯ ಕಾಲಿಗೆ ಬಿದ್ದು ಬಸ್ ಸಂಚಾರ ಸ್ಥಗಿತಗೊಳಿಸುವಂತೆ ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ಕಣ್ಣಿನ ಚಿಕಿತ್ಸೆಗೆ ಮಾಧುರಿ ಜಾಧವ್ ಫೌಂಡೇಶನ್ ಮೂಲಕ ಚೆಕ್ ಹಸ್ತಾಂತರ

Spread the loveಬೆಳಗಾವಿ: ಪಟಾಕಿ ಸ್ಫೋಟದಲ್ಲಿ ಕಣ್ಣು ಕಳೆದುಕೊಂಡ ಶಹಾಪುರದ ಶಿವ ಲೋಹರ್ ಅವರ ಚಿಕಿತ್ಸೆಗೆ ಸಹಾಯದ ಮಹಾಪೂರ ಹರಿದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ