ರಾಯಚೂರು: ಒಂದು ತಿಂಗಳಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಭೂಹಗರಣದ ಸಂಪೂರ್ಣ ದಾಖಲೆಗಳನ್ನು ಬಿಡುಗಡೆ ಮಾಡುತ್ತೇವೆ ಎಂದು ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾದೇಗೌಡರು ಹೆಚ್‍ಡಿಕೆ ಭೂ ಕಬಳಿಕೆ ಬಗ್ಗೆ ಹೇಳಿದ್ದರು. ಲೋಕಾಯುಕ್ತ ಮೆಟ್ಟಿಲು ಏರಿದ್ದರೂ , ಹೈಕೋರ್ಟ್ ಸೂಚಿಸಿದ್ದರೂ ಅವರ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿಲ್ಲ. ರಾಮನಗರದ ಕೇತಗಾನಹಳ್ಳಿ ಪರಿಶಿಷ್ಟ ಜಾತಿಗೆ ಸೇರಿದ 200 ಎಕರೆ, 65 ಎಕರೆ ಗೋಮಾಳ ಕಬಳಿಕೆ ಮಾಡಿದ್ದಾರೆ. ಶೀಘ್ರದಲ್ಲೇ ಅವರ ವಿರುದ್ಧದ ದಾಖಲೆ ಬಿಡುಗಡೆ ಮಾಡುವುದಾಗಿ ತಿಳಿಸಿದರು.