Breaking News

ಹುಬ್ಬಳ್ಳಿ – ಧಾರವಾಡ ಮೊಟ್ಟ ಮೊದಲ ಮಹಿಳಾ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ

Spread the love

ಹುಬ್ಬಳ್ಳಿ/ಬೆಂಗಳೂರು: ರಾಜ್ಯ ಸರ್ಕಾರ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮುಂದುವರೆಸಿದೆ.

ಹುಬ್ಬಳ್ಳಿ ಧಾರವಾಡ ನೂತ‌ನ ಪೊಲೀಸ್ ಆಯುಕ್ತರನ್ನಾಗಿ ಮಹಿಳಾ ಐಪಿಎಸ್ ಅಧಿಕಾರಿ ರೇಣುಕಾ ಸುಕುಮಾರ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹುಬ್ಬಳ್ಳಿ – ಧಾರವಾಡ ಪೊಲೀಸ್ ಕಮಿಷನರೇಟ್​ನ ಮೊಟ್ಟ ಮೊದಲ ಮಹಿಳಾ ಕಮಿಷನರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಪ್ರಭಾರಿ ಆಯುಕ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದ ಸಂತೋಷ ಬಾಬು ಅವರನ್ನು ಬೇರೆಡೆಗೆ ವರ್ಗಾವಣೆ ಮಾಡಲಾಗಿದೆ. ರೇಣುಕಾ ಸುಕುಮಾರ ಅವರು 2011ರ ಐಪಿಎಸ್ ಬ್ಯಾಚ್​ನ ಅಧಿಕಾರಿಯಾಗಿದ್ದು, ಸದ್ಯ ಗೃಹ ರಕ್ಷಕ ದಳದ ಡೆಪ್ಯುಟಿ ಕಮಾಂಡೆಂಟ್ ಜನರಲ್ ಆಗಿ ಕಾರ್ಯ ನಿರ್ವಹಿಸಿದ್ದರು. ಹಿಂದೆಯೂ ಹು-ಧಾ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಡಿಸಿಪಿ ಆಗಿ ಸಹ ಕಾರ್ಯನಿರ್ವಹಿಸಿದ್ದರು.

 ಆದೇಶ ಪ್ರತಿಹು-ಧಾ ಇತಿಹಾಸದಲ್ಲಿಯೇ ಪ್ರಥಮ ಮಹಿಳಾ ಪೊಲೀಸ್ ಆಯುಕ್ತೆಯಾಗಿ ಆಯ್ಕೆಯಾಗಿದ್ದಾರೆ. ಡಿಸಿಪಿ ಇದ್ದಾಗಲೂ‌ ಕೂಡ ಅವಳಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇದೀಗ ಕಮಿಷನರ್ ಆಗಿ ಆಗಮಿಸಿದ್ದರಿಂದ ವಾಣಿಜ್ಯ ನಗರಿ ಕಾನೂನು ಸುವ್ಯವಸ್ಥೆ ಹತೋಟಿಗೆ ತರಬೇಕಿದೆ.


Spread the love

About Laxminews 24x7

Check Also

ಬೆಳಗಾವಿ ಜಲಾಶಯಗಳಲ್ಲಿ ಜೀವಕಳೆ

Spread the love ಬೆಳಗಾವಿ: ಜಿಲ್ಲೆಯಲ್ಲಿ ಈ ಬಾರಿ ಪೂರ್ವ ಮುಂಗಾರು ಉತ್ತಮವಾಗಿದೆ. ಜೂನ್‌ ಅಂತ್ಯದವರೆಗೆ ಮುಂಗಾರು 286.46 ಮಿ.ಮೀ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ