Breaking News

ಅಕ್ರಮ ಗಣಿಗಾರಿಕೆ ವಿರುದ್ಧ ಅಮಿತ್ ಶಾಗೆ ದೂರು; ತನಿಖೆಗೆ ಒತ್ತಾಯಿಸಿದ ಸುಮಲತಾ

Spread the love

ನವದೆಹಲಿ: ಕೆ.ಆರ್.ಎಸ್. ಸುತ್ತಮುತ್ತ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಸಂಸದೆ ಸುಮಲತಾ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದೂರು ನೀಡಿದ್ದಾರೆ.

ನವದೆಹಲಿಯಲ್ಲಿ ಅಮಿತ್ ಶಾ ಭೇಟಿಯಾದ ಸುಮಲತಾ, ಅಕ್ರಮ ಗಣಿಗಾರಿಕೆಯಿಂದ ಕೆ.ಆರ್.ಎಸ್ ಗೆ ಆಗುತ್ತಿರುವ ಅಪಾಯ, ಸುತ್ತಮುತ್ತಲಿನ ರೈತರು, ಪರಿಸರ, ಅರಣ್ಯ ಹಾಗೂ ಪ್ರಾಣಿ ಸಂಕುಲಕ್ಕೆ ಆಗುತ್ತಿರುವ ತೊಂದರೆಗಳ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದು, ತನಿಖೆಗೆ ಆಗ್ರಹಿಸಿದ್ದಾರೆ.

 

ಕೆ.ಆರ್.ಎಸ್ ಡ್ಯಾಂ ಬಿರುಕು ಹೇಳಿಕೆ ಬೆನ್ನಲ್ಲೇ ಅಕ್ರಮ ಗಣಿಗಾರಿಕೆ ವಿರುದ್ಧ ಸಮರ ಸಾರಿದ್ದ ಸುಮಲತಾ ಹಾಗೂ ಜೆಡಿಎಸ್ ನಾಯಕರ ನಡುವಿನ ವಾಕ್ಸಮರ ತಾರಕಕೇರಿತ್ತು. ಇತ್ತೀಚೆಗಷ್ಟೇ ರಾಜ್ಯಪಾಲರನ್ನು ಭೇಟಿಯಾಗಿ ದೂರು ನೀಡಿದ್ದ ಸುಮಲತಾ ಇದೀಗ ಅಮಿತ್ ಶಾ ಅವರನ್ನು ಭೇಟಿಯಾಗಿ ಉನ್ನತಮಟ್ಟದ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ