Breaking News
Home / ರಾಜಕೀಯ / ರಾಜ್ಯಸಭಾ ಸಭಾಪತಿ ವೆಂಕಯ್ಯನಾಯ್ಡು ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಸಾಧ್ಯತೆ

ರಾಜ್ಯಸಭಾ ಸಭಾಪತಿ ವೆಂಕಯ್ಯನಾಯ್ಡು ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಸಾಧ್ಯತೆ

Spread the love

ನವದೆಹಲಿ, ಜುಲೈ 31: ಮುಂದಿನ ವಾರ ವಿಪಕ್ಷಗಳು ರಾಜ್ಯಸಭಾ ಸಭಾಪತಿ ವೆಂಕಯ್ಯ ನಾಯ್ಡು ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಬಾರಿ ಸಂಸತ್ ಮುಂಗಾರು ಅಧಿವೇಶನವು ಲೋಕಸಭೆ ಹಾಗೂ ರಾಜ್ಯಸಭೆ ಎರಡರಲ್ಲೂ ಪೆಗಾಸಸ್‌ನಿಂದಲೇ ಆರಂಭವಾಗಿತ್ತು. ಆಮೇಲೆ ಕೃಷಿ ಕಾಯ್ದೆ ಸೇರಿದಂತೆ ಬೇರೆ ವಿಚಾರಗಳಿಗೆ ತಿರುಗಿತು.

ಅಧಿವೇಶನ ಆರಂಭವಾಗಿ ಎರಡು ವಾರಗಳೇ ಕಳೆದರೂ ಇದುವರೆಗೂ ಸರಿಯಾಗಿ ಅಧಿವೇಶನವನ್ನು ನಡೆಸಲು ಸಾಧ್ಯವಾಗಿಲ್ಲ. ಇಡೀ ದೇಶದಲ್ಲಿ ಸಂಚಲನ ಮೂಡಿಸಿರುವ ಪೆಗಾಸಸ್ ಬೇಹುಗಾರಿಕೆ ವಿವಾದದ ಬಗ್ಗೆ ರಾಜ್ಯಸಭೆಯಲ್ಲಿ ಚರ್ಚೆ ನಡೆಸಲು ಸೂಕ್ತ ಅವಕಾಶ ನೀಡದ ಹಿನ್ನೆಲೆಯಲ್ಲಿ ಮುಂದಿನ ವಾರ ರಾಜ್ಯಸಭೆ ಸಭಾಪತಿ ಎಂ. ವೆಂಕಯ್ಯ ನಾಯ್ಡು ವಿರುದ್ಧ ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯ ಮಂಡನೆ ಮಾಡುವ ಎನ್ನುವ ವಿಷಯ ಮೂಲಗಳಿಂದ ತಿಳಿದುಬಂದಿದೆ.

ಭಾರತದ ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾ ಸಭಾಪತಿ ವೆಂಕಯ್ಯ ನಾಯ್ಡು ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡಲು ವಿರೋಧ ಪಕ್ಷಗಳಾದ ಕಾಂಗ್ರೆಸ್, ಟಿಎಂಸಿ, ಡಿಎಂಕೆ ಮತ್ತಿತರ ಪಕ್ಷಗಳ ನಾಯಕರು ಚಿಂತನೆ ನಡೆಸಿದ್ದಾರೆ ಎಂಬ ಮಾಹಿತಿಗಳು ಲಭ್ಯವಾಗಿವೆ.

ಜುಲೈ 19ರಂದು ಆರಂಭವಾಗಿರುವ ಮುಂಗಾರು ಅಧಿವೇಶನದಲ್ಲಿ ಪೆಗಾಸಸ್ ಬೇಹುಗಾರಿಕೆ, ಕೋವಿಡ್ ಲಸಿಕೆ ಮತ್ತಿತರ ವಿಷಯಗಳ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಬೇಕೆಂದು ಪ್ರತಿದಿನವೂ ನೋಟಿಸ್ ನೀಡಲಾಗಿದೆ. ಆದರೆ, ಕೇಂದ್ರ ಸರ್ಕಾರ ಇದುವರೆಗೂ ಯಾವುದೇ ವಿವರಣೆಯನ್ನು ನೀಡಿಲ್ಲ ಎಂದು ವಿಪಕ್ಷ ನಾಯಕರು ಆರೋಪಿಸಿದ್ದಾರೆ.

ಈ ವಾರ ಅಧಿವೇಶನದಲ್ಲಿ ಪೆಗಾಸಸ್‌, ನೂತನ ಕೃಷಿ ಕಾಯ್ದೆ ಸೇರಿದಂತೆ ಹಲವು ವಿಚಾರಗಳಿಗೆ ಸಂಬಂಧಿಸಿದಂತೆ ವಿಪಕ್ಷಗಳ ಗದ್ದಲ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಸಭಾ ಸಭಾಪತಿ ವೆಂಕಯ್ಯನಾಯ್ಡು ಅವರು ತೀವ್ರ ಅಸಮಾಧಾನಗೊಂಡಿದ್ದು, ನಾವು ಅಸಹಾಯಕರಾಗುತ್ತಿದ್ದೇವೆ ಎಂದು ಹೇಳಿಕೆ ನೀಡಿದ್ದರು.

ಈಗಾಗಲೇ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸಂಸದ ಶಂತನು ಸೇನ್ ಕಳೆದ ವಾರ ರಾಜ್ಯಸಭಾ ಅಧಿವೇಶನದ ವೇಳೆ ಕೇಂದ್ರ ಐಟಿ ಸಚಿವ ಅಶ್ವಿನಿ ವೈಷ್ಣವ್ ಅವರ ಕೈಯಲ್ಲಿದ್ದ ಪೆಗಾಸಸ್ ವಿವಾದದ ಕುರಿತ ಹೇಳಿಕೆಯ ಪ್ರತಿಯನ್ನು ಕಸಿದುಕೊಂಡು, ಹರಿದುಹಾಕಿದ್ದಾರೆ ಎಂಬ ಕಾರಣಕ್ಕೆ ಅವರನ್ನು ಅಧಿವೇಶನದಿಂದ ಅಮಾನತು ಮಾಡಲಾಗಿದೆ. ಈ ಕಾರಣದಿಂದ ವಿಪಕ್ಷಗಳಿಗೆ ರಾಜ್ಯಸಭಾ ಸಭಾಪತಿ ವೆಂಕಯ್ಯ ನಾಯ್ಡು ವಿರುದ್ಧ ಅಸಮಾಧಾನ ಇನ್ನೂ ಹೆಚ್ಚಾಗಿದೆ.

ಅದೇ ರೀತಿ ಆಡಳಿತ ಪಕ್ಷದವರು ಕೂಡ ವಿರೋಧ ಪಕ್ಷದವರಿಂದಲೇ ಅಧಿವೇಶನ ಮುಂದೂಡಿಕೆಯಾಗುತ್ತಿದೆ ಎಂದು ಆರೋಪಿಸಿದ್ದಾರೆ. ವಿರೋಧ ಪಕ್ಷದವರು ದಿನಕ್ಕೊಂದು ಗಲಾಟೆಯೆಬ್ಬಿಸಿ, ಪ್ರತಿಭಟನೆ ಮಾಡುವ ಮೂಲಕ ಸದನವನ್ನು ಮುನ್ನಡೆಸದಂತೆ ತಡೆಯೊಡ್ಡುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಮುಂದಿನ ವಾರ ಒಂದುವೇಳೆ ವಿರೋಧ ಪಕ್ಷಗಳು ರಾಜ್ಯಸಭೆಯಲ್ಲಿ ಎಂ. ವೆಂಕಯ್ಯ ನಾಯ್ಡು ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆ ಮಾಡಿದರೆ ಮುಂದಿನ ವಾರ ಅಧಿವೇಶನದಲ್ಲಿ ಮತ್ತೊಂದು ಗಲಾಟೆಯೇಳುವುದು ಖಚಿತ.

ಸಂಸತ್ತಿನ ಉಭಯ ಸದನಗಳಲ್ಲಿ ವಿರೋಧ ಪಕ್ಷಗಳ ಸದಸ್ಯರು ಪೆಗಾಸಸ್‌, ನೂತನ ಕೃಷಿ ಕಾಯ್ದೆಗಳು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಪ್ರಸ್ತಾಪಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಸಾರ್ವಜನಿಕರಿಗೆ ಅನುಕೂಲವಾಗುವ ಪ್ರಮುಖವಾದ ವಿಷಯಗಳ ಬಗ್ಗೆ ಚರ್ಚಿಸದಂತೆ ರಾಜ್ಯಸಭಾ ಸದಸ್ಯರನ್ನು ತಡೆಯಲಾಗಿದೆ. ದಿನದಿಂದ ದಿನಕ್ಕೆ ನಾವು ಅಸಹಾಯಕರಾಗುತ್ತಿದ್ದೇವೆ ಎಂದು ವೆಂಕಯ್ಯ ನಾಯ್ಡು ಅಸಮಾಧಾನ ವ್ಯಕ್ತಪಡಿಸಿದ್ದರು.

ನಾವು ಅಸಹಾಯಕರಾಗುತ್ತಿದ್ದೇವೆ ಎಂದಿದ್ದ ಸಭಾಪತಿ: ಪೆಗಾಸಸ್‌, ನೂತನ ಕೃಷಿ ಕಾಯ್ದೆ ಸೇರಿದಂತೆ ಹಲವು ವಿಚಾರಗಳಿಗೆ ಸಂಬಂಧಿಸಿದಂತೆ ವಿಪಕ್ಷಗಳ ಗದ್ದಲ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಸಭಾ ಸಭಾಪತಿ ವೆಂಕಯ್ಯನಾಯ್ಡು ಅವರು ತೀವ್ರ ಅಸಮಾಧಾನಗೊಂಡಿದ್ದು, ನಾವು ಅಸಹಾಯಕರಾಗುತ್ತಿದ್ದೇವೆ ಎಂದು ಹೇಳಿದ್ದರು.

ಜುಲೈ 26ರಂದು ಸಂಸತ್ತಿನ ಉಭಯ ಸದನಗಳಲ್ಲಿ ವಿರೋಧ ಪಕ್ಷಗಳ ಸದಸ್ಯರು ಪೆಗಾಸಸ್‌, ನೂತನ ಕೃಷಿ ಕಾಯ್ದೆಗಳು ಸೇರಿದಂತೆ ಹಲವು ವಿಷಯಗಳ ಬಗ್ಗೆ ಪ್ರಸ್ತಾಪಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದರು. ಇದರಿಂದ ಗದ್ದಲ ಉಂಟಾದ ಪರಿಣಾಮ ಕಲಾಪವನ್ನು ಮಧ್ಯಾಹ್ನ 2 ಗಂಟೆವರೆಗೆ ಮಂದೂಡಲಾಗಿತ್ತು.

ರಾಜ್ಯಸಭಾ ಕಲಾಪವನ್ನು ಮಧ್ಯಾಹ್ನ 2ಕ್ಕೆ ಮುಂದೂಡಿದ ಸಭಾಧ್ಯಕ್ಷ ಎಂ.ವೆಂಕಯ್ಯನಾಯ್ಡು, ಸಾರ್ವಜನಿಕ ಪ್ರಾಮುಖ್ಯತೆಯ ವಿಷಯಗಳ ಬಗ್ಗೆ ಚರ್ಚಿಸದಂತೆ ಸದಸ್ಯರನ್ನು ತಡೆಯಲಾಗಿದೆ.

ದಿನದಿಂದ ದಿನಕ್ಕೆ ನಾವು ಅಸಹಾಯಕರಾಗುತ್ತಿದ್ದೇವೆ’ ಎಂದರು. ಲೋಕಸಭೆಯಲ್ಲಿ ಸುಮಾರು 30 ನಿಮಿಷಗಳ ಕಾಲ ಕಲಾಪ ನಡೆದಿದ್ದು, ಪ್ರಶ್ನೋತ್ತರ ಅವಧಿಯಲ್ಲಿ ಕೆಲವೊಂದು ಪ್ರಶ್ನೆಗಳಿಗೆ ಉತ್ತರಿಸಲಾಯಿತು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ