Breaking News

ಸಂಪುಟ ರಚನೆ: ಸಂಭವನೀಯ ಸಚಿವರ ಪಟ್ಟಿಯೊಂದಿಗೆ ದೆಹಲಿಗೆ ಹೊರಟ ಸಿಎಂ ಬೊಮ್ಮಾಯಿ

Spread the love

ಬೆಂಗಳೂರು: ನೂತನ ಸಿಎಂ ಬಸವರಾಜ್ ಬೊಮ್ಮಾಯಿ ಮತ್ತೆ ದೆಹಲಿಗೆ ಪ್ರಯಾಣ ಬೆಳೆಸಿದ್ದು, ಸಚಿವ ಸಂಪುಟ ರಚನೆ ನಿಟ್ಟಿನಲ್ಲಿ ವರಿಷ್ಠರ ಸಮ್ಮತಿ ಪಡೆದು ವಾಪಸ್ ಆಗಲಿದ್ದಾರೆ.

ನೂತನ ಸಚಿವರ ಲಿಸ್ಟ್ ನೊಂದಿಗೆ ಸಂಜೆ 5:40ಕ್ಕೆ ದೆಹಲಿಗೆ ತೆರಳಲಿರುವ ಸಿಎಂ ಬೊಮ್ಮಾಯಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ ಒಪ್ಪಿಗೆ ಪಡೆದು ಸಚಿವರ ಪಟ್ಟಿ ಅಂತಿಮಗೊಳಿಸಲಿದ್ದಾರೆ. ನಾಳೆಯೇ ಸಂಪುಟ ರಚನೆಗೆ ಮುಹೂರ್ತ ಫೈನಲ್ ಆಗಲಿದ್ದು, ಮಂಗಳವಾರ ಅಥವಾ ಬುಧವಾರ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.

ಇನ್ನು ನೂತನ ಸಂಪುಟದಲ್ಲಿ ಹಲವು ಹಿರಿಯ ನಾಯಕರಿಗೆ ಕೊಕ್ ನೀಡಿ, ಹೊಸ ಹಾಗೂ ಯುವ ಮುಖಗಳಿಗೆ ಆದ್ಯತೆ ನೀಡುವ ನಿರೀಕ್ಷೆ ಇದೆ


Spread the love

About Laxminews 24x7

Check Also

ಸಿಲಿಂಡರ್ ದರ ಹೆಚ್ಚಳಕ್ಕೆ ಕಾಂಗ್ರೆಸ್ ಆಕ್ರೋಶ – ಖಾಲಿ ಸಿಲಿಂಡರ್ ಹಿಡಿದು ಪ್ರತಿಭಟನೆ

Spread the loveಬೆಂಗಳೂರು: ಸಿಲಿಂಡರ್ ದರ ಹೆಚ್ಚಳಕ್ಕೆ  ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ಕೆಪಿಸಿಸಿ ಕಚೇರಿ ಮುಂದೆ ಕೇಂದ್ರ ಸರ್ಕಾರದ ವಿರುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ