ದಾವಣಗೆರೆ: ದಾವಣಗೆರೆ ಜಿಲ್ಲೆಯ ಐವರು ಬಿಜೆಪಿ ಶಾಸಕರಲ್ಲಿ ಯಾರಿಗಾದರೂ ಸಚಿವ ಸ್ಥಾನ ನೀಡಲಿ ಎಂದು ಹತ್ತೂರು ಗ್ರಾಮದಲ್ಲಿ ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.
ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಹತ್ತೂರು ಗ್ರಾಮದಲ್ಲಿ ಮಾತನಾಡಿದ ರೇಣುಕಾಚಾರ್ಯ, ಸಂಪುಟ ವಿಸ್ತರಣೆ ಬಗ್ಗೆ ಪ್ರತಿಕ್ರಿಯೆ ನೀಡಿ ಪಕ್ಷದ ವರಿಷ್ಠರು, ಸಿಎಂ ಸಂಪುಟ ರಚನೆ ಬಗ್ಗೆ ನಿರ್ಧರಿಸಲಿದ್ದಾರೆ. ಸಿಎಂ ಪರಮಾಧಿಕಾರ ಹೊಂದಿದ್ದು, ಪಕ್ಷದ ನಾಯಕರು ಮತ್ತು ಸಿಎಂ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧವಾಗಿರುತ್ತೇನೆ ಎಂದು ಹೇಳಿದ್ದಾರೆ.
Laxmi News 24×7