Breaking News
Home / ಜಿಲ್ಲೆ / ಬೆಂಗಳೂರು / B.S.Y.ಅವರ ಸೂಚನೆಯಂತೆ, ನಗರದಲ್ಲಿ 665 ಅಂಬ್ಯುಲೆನ್ಸ್ ಗಳನ್ನು ನಿಯೋಜಿಸಲಾಗಿದೆ.

B.S.Y.ಅವರ ಸೂಚನೆಯಂತೆ, ನಗರದಲ್ಲಿ 665 ಅಂಬ್ಯುಲೆನ್ಸ್ ಗಳನ್ನು ನಿಯೋಜಿಸಲಾಗಿದೆ.

Spread the love

ಬೆಂಗಳೂರು: ನಗರದಲ್ಲಿ ಕೊರೊನಾ ರೋಗಿಗಳು ಮತ್ತು ಇತರೆ ರೋಗಿಗಳನ್ನು ಆಸ್ಪತ್ರೆ, ಕೋವಿಡ್ ಆರೈಕೆ ಕೇಂದ್ರಗಳಿಗೆ ಕರೆದೊಯ್ಯಲು 665 ಅಂಬುಲೆನ್ಸ್ ಗಳನ್ನು ನಿಯೋಜಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸೂಚನೆಯಂತೆ, ನಗರದಲ್ಲಿ 665 ಅಂಬ್ಯುಲೆನ್ಸ್ ಗಳನ್ನು ನಿಯೋಜಿಸಲಾಗಿದೆ. ಕೊರೊನಾ ಸೋಂಕಿಗೊಳಗಾದ ಮತ್ತು ಇತರೆ ರೋಗಿಗಳನ್ನು ಆಸ್ಪತ್ರೆ ಹಾಗೂ ಕೋವಿಡ್ ಕೇಂದ್ರಕ್ಕೆ ಕೊಂಡೊಯ್ಯಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಬಿಬಿಎಂಪಿಯ ಪೂರ್ವ ವಲಯದಲ್ಲಿ 127, ಪಶ್ಚಿಮ ವಲಯದಲ್ಲಿ 141, ದಕ್ಷಿಣದಲ್ಲಿ 110, ರಾಜರಾಜೇಶ್ವರಿ ನಗರದಲ್ಲಿ 40, ಬೊಮ್ಮನಹಳ್ಳಿಯಲ್ಲಿ 43, ಮಹದೇವಪುರದಲ್ಲಿ 52, ದಾಸರಹಳ್ಳಿಯಲ್ಲಿ 24, ಯಲಹಂಕದಲ್ಲಿ 33 ಆಂಬ್ಯುಲೆನ್ಸ್ ಗಳ ವ್ಯವಸ್ಥೆ ಮಾಡಲಾಗಿದೆ. ಪೊಲೀಸ್ ಇಲಾಖೆಯಿಂದ 11 ಹಾಗೂ ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯಲ್ಲಿ 84 ಅಂಬ್ಯುಲೆನ್ಸ್ ಗಳನ್ನು ನಿಯೋಜನೆ ಮಾಡಲಾಗಿದೆ.

ಮೃತದೇಹ ಹಸ್ತಾಂತರಕ್ಕೆ ಕ್ರಮ: ಕುಮಾರಸ್ವಾಮಿ ಲೇಔಟ್ ನ ಸಾಗರ್ ಆಸ್ಪತ್ರೆಗೆ ದಾಖಲಾಗಿ ಮೃತಪಟ್ಟಿದ್ದ ರೋಗಿಯ ಮೃತದೇಹ ಹಸ್ತಾಂತರಕ್ಕೆ ಸಚಿವ ಡಾ.ಕೆ.ಸುಧಾಕರ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ