Breaking News
Home / ರಾಜಕೀಯ / ಮಹಾರಾಷ್ಟ್ರದಲ್ಲಿಯೂ ರೈತರಿಂದ ಹಾಲು ಖರೀದಿಗೆ ಮುಂದಾಗಲು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಗೆ ದೇವೇಂದ್ರ ಫಡ್ನವಿಸ್ ಸಲಹೆ

ಮಹಾರಾಷ್ಟ್ರದಲ್ಲಿಯೂ ರೈತರಿಂದ ಹಾಲು ಖರೀದಿಗೆ ಮುಂದಾಗಲು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಗೆ ದೇವೇಂದ್ರ ಫಡ್ನವಿಸ್ ಸಲಹೆ

Spread the love

ನಾಗಪುರ : ಕರ್ನಾಟಕದ ಮಾದರಿಯಂತೆ ಮಹಾರಾಷ್ಟ್ರದಲ್ಲಿಯೂ ರೈತರಿಂದ ನೇರವಾಗಿ ಹಾಲನ್ನು ಖರೀದಿ ಮಾಡಿ, ರೈತರ ಆರ್ಥಿಕಾಭಿವೃದ್ಧಿಗೆ ಕ್ರಮಗಳನ್ನು ಕೈಗೊಳ್ಳುವಂತೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನವಿಸ್ ಅವರು ಕೆಎಂಎಫ್‌ಗೆ ಸಲಹೆ ಮಾಡಿದರು.

 

 

 

 

ಭಾನುವಾರದಂದು ಮಹಾರಾಷ್ಟ್ರದ ವಿದರ್ಭ ಪ್ರಾಂತ್ಯದಲ್ಲಿ ಆರಂಭಗೊಂಡ ನಂದಿನಿ ಹಾಲು ಮತ್ತು ಮೊಸರು ಮಾರುಕಟ್ಟೆ ವಿಸ್ತರಣಾ ಜಾಲಕ್ಕೆ ನಾಗ್ಪುರ್‌ದಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕೆಎಂಎಫ್ ಸಂಸ್ಥೆಯು ರೈತರಿಂದ ನೇರವಾಗಿ ಹಾಲನ್ನು ಖರೀದಿ ಮಾಡಲಾಗುತ್ತಿದೆ. ನಮ್ಮಲ್ಲಿಯೂ ಸಹ ಇದನ್ನೇ ಮಾದರಿಯನ್ನಾಗಿ ಇಟ್ಟುಕೊಂಡು ಕೆಲಸ ಮಾಡಿದ್ದಾದರೇ ರೈತ ಸಮೂಹಕ್ಕೆ ಇದರಿಂದ ಅನುಕೂಲವಾಗುತ್ತದೆ ಎಂದು ಹೇಳಿದರು.

ವಿದರ್ಭ ಭಾಗದಿಂದ ಕೆಎಂಎಫ್‌ನ ನಂದಿನಿ ಉತ್ಪನ್ನಗಳ ಮಾರಾಟವನ್ನು ಆರಂಭಿಸಿರುವುದು ಖುಷಿಯಾಗಿದೆ. ಸ್ಪರ್ಧಾತ್ಮಕ ದರದಲ್ಲಿ ಗುಣಮಟ್ಟದ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ನೀಡುತ್ತಿರುವುದನ್ನು ನಾನು ಕೇಳಿದ್ದೇನೆ. ಗ್ರಾಹಕರ ನೆಚ್ಚಿನ ನಂದಿನಿ ಉತ್ಪನ್ನಗಳು ಕರ್ನಾಟಕದಲ್ಲಿ ಮನೆ ಮಾತಾಗಿರುವುದನ್ನು ಗಮನಿಸಿದ್ದೇನೆ. ಸಹಕಾರಿ ತತ್ವವನ್ನು ಪರಿಪಾಲನೆ ಮಾಡಿಕೊಂಡು ಬರುತ್ತಿರುವ ಕೆಎಂಎಫ್ ನಂದಿನಿ ಉತ್ಪನ್ನಗಳು ಮಹಾರಾಷ್ಟ್ರದ ಪ್ರತಿ ಮನೆ ಮನೆಗೆ ತಲುಪಲಿ ಎಂದು ಫಡ್ನವಿಸ್ ಆಶಿಸಿದರು.

ಸಹಕಾರಿ ಕ್ಷೇತ್ರವು ವ್ಯವಹಾರಿಕವಾಗಿ ಅಭಿವೃದ್ದಿ ಹೊಂದಲು ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಕೇಂದ್ರದಲ್ಲಿ ಸಹಕಾರಿ ಸಚಿವಾಲಯವನ್ನು ಆರಂಭಿಸಿದ್ದಾರೆ. ಇದಕ್ಕೆ ಪೂರಕವಾಗಿ ಕೆಎಂಎಫ್ ನಂತಹ ಸಂಸ್ಥೆಗಳು ಕರ್ತವ್ಯ ನಿರ್ವಹಿಸಿ ಸಹಕಾರಿ ರಂಗದ ಬೆಳವಣಿಗೆಗೆ ಶ್ರಮಿಸಲಿ. ಅದರ ನಂದಿನಿ ಹಾಲು ಮತ್ತು ಇತರೇ ಉತ್ಪನ್ನಗಳ ಮಾರುಕಟ್ಟೆ ಅಭಿವೃದ್ಧಿಪಡಿಸಲು ಅಗತ್ಯವಿರುವ ಎಲ್ಲ ನೆರವನ್ನು ನೀಡಲಾಗುವುದು. ದೇಶದ ಪ್ರತಿಷ್ಠಿತ ಅಮೂಲ್ ನಂತರ ಕೆಎಂಎಫ್ ಎರಡನೇ ಸ್ಥಾನ ಗಿಟ್ಟಿಸಿರುವುದು ಸಹಕಾರಿ ಕ್ಷೇತ್ರದಲ್ಲಿ ಐತಿಹಾಸಿಕ ಸಾಧನೆಗೆ ಸಾಕ್ಷಿಯಾಗಿದೆ. ನಾಗ್ಪುರ್ ಪ್ರಾಂತ್ಯದಿಂದ ಪ್ರಾರಂಭಗೊಂಡಿರುವ ಕೆಎಂಎಫ್ ಉನ್ನತಿ ಮತ್ತು ಪ್ರಗತಿಗೆ ಎಲ್ಲ ಸಹಕಾರ ನೀಡುವ ಭರವಸೆ ನೀಡಿದರು.


Spread the love

About Laxminews 24x7

Check Also

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚನೆ, ಅತ್ತ ವಿದೇಶಕ್ಕೆ ಹೋದರಾ ಸಂಸದ?

Spread the loveಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna) ಅವರದ್ದು ಎನ್ನಲಾದ ವಿಡಿಯೋ ಪ್ರಕರಣದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ