Breaking News

ನೀಲಿ ಚಿತ್ರ ನಿರ್ಮಾಣ ಆರೋಪ: ಬಂಗಾಳಿ ನಟಿ ನಂದಿತ ದತ್ತ ಬಂಧನ

Spread the love

ಕೋಲ್ಕತ್ತಾ: ಉದ್ಯಮಿ ರಾಜ್‌ ಕುಂದ್ರಾ ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣದಲ್ಲಿ ಬಂಧಿತನಾಗಿರುವ ಬೆನ್ನಲ್ಲೇ ಪಶ್ಚಿಮ ಬಂಗಾಳದಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.

ನೀಲಿ ಚಿತ್ರ ನಿರ್ಮಾಣ ಆರೋಪದ ಮೇಲೆ ನಟಿ ನಂದಿತ ದತ್ತ ಹಾಗೂ ಆಕೆಯ ಮ್ಯಾನೇಜರ್‌ ಮಾಣಿಕ್‌ ಘೋಷ್‌ನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ನಂದಿತ ದತ್ತ ಅಶ್ಲೀಲ ಚಿತ್ರಗಳನ್ನು ನಿರ್ಮಾಣ ಮಾಡಿ ಅವುಗಳನ್ನು ಓಟಿಟಿ ಮೂಲಕ ಪ್ರಸಾರ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ. ಈ ಸಂಬಂಧ ಜುಲೈ 26ರಂದು ಇಬ್ಬರು ಯುವತಿಯರು ದೂರು ನೀಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಆಕೆಯ ಮ್ಯಾನೇಜರ್‌ ಆಗಿರುವ ಮಾಣಿಕ್‌ ಘೋಷ್‌ ಕೂಡ ನೀಲಿ ಚಿತ್ರಗಳ ನಿರ್ಮಾಣದಲ್ಲಿ ಪಾಲುದಾರನಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ರೂಪದರ್ಶಿ ನಂದಿತಾ ದತ್ತ ಹತ್ತಾರು ಬಂಗಾಳಿ ಹಾಗೂ ಬೋಜ್‌ಪುರಿ ಸಿನಿಮಾಗಳಲ್ಲಿ ನಟಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ