Breaking News

ಮೂಡಬಿದಿರೆ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ‌ ವನಮಹೋತ್ಸವ

Spread the love

ಮೂಡಬಿದಿರೆ: ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ವನಮಹೋತ್ಸವವನ್ನು ಆಚರಿಸಲಾಯಿತು.

ಮೂಡಬಿದಿರೆಯ ಪುರಸಭಾ ಅಧ್ಯಕ್ಷರಾದ ಪ್ರಸಾದ್ ಭಂಡಾರಿಯವರು ಮುಖ್ಯ ಅತಿಥಿಗಳಾಗಿ ಆಗಮಿಸಿ, “ಅಭಿವೃದ್ಧಿಗಾಗಿ ಕಾಂಕ್ರೀಟಿನ ನಾಡನ್ನು ಬೆಳೆಸುತ್ತಿರುವ ಸಂದರ್ಭದಲ್ಲಿ ಮನುಷ್ಯನ ಉಸಿರಿನ ರಕ್ಷಣೆಗಾಗಿ ಹಸಿರನ್ನ ಬೆಳೆಸಬೇಕಾದ ಅನಿವಾರ್ಯತೆ ಹಿಂದೆಂದಿಗಿಂತಲೂ ಹೆಚ್ಚಿದೆ. ಆ ನಿಟ್ಟಿನಲ್ಲಿ ಎಕ್ಸಲೆಂಟ್ ವಿದ್ಯಾಸಂಸ್ಥೆ ಅಭಿವೃದ್ಧಿಯ ಪಥದಲ್ಲಿ ಸಾಗುತ್ತ ಶಿಕ್ಷಣದ ಜೊತೆಗೆ ಪರಿಸರವನ್ನು ಉಳಿಸಿ ಬೆಳಿಸುವ ಕೈಂಕರ್ಯದಲ್ಲಿ ತೊಡಗಿ ಪರಿಸರವನ್ನು ಹಸಿರಾಗಿಸಿದೆ” ಎಂದು ಮಾತನಾಡಿ ಸಾಂಕೇತಿಕವಾಗಿ ಗಿಡ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ವರ್ಷ ಎಕ್ಸಲೆಂಟ್ ಸಂಸ್ಥೆಯ ಆವರಣದಲ್ಲಿ ವಿವಿಧ ತಳಿಯ 500ಕ್ಕಿಂತಲೂ ಹೆಚ್ಚಿನ ಗಿಡಗಳನ್ನು ನೆಟ್ಟು ಪರಿಸರ ಕಾಳಜಿಯನ್ನು ವ್ಯಕ್ತಪಡಿಸಲಾಯಿತು.

ಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್‍ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ, ಮುಖ್ಯೋಪಾಧ್ಯಾಯ ಶಿವಪ್ರಸಾದ್ ಭಟ್, ಆಡಳಿತಾಧಿಕಾರಿ ಹರೀಶ್ ಶೆಟ್ಟಿ ಮತ್ತು ಬೋಧಕ, ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು. ಸಂಸ್ಕøತ ಉಪನ್ಯಾಸಕ ತೇಜಸ್ವಿ ಭಟ್ ಕಾರ್ಯಕ್ರಮ ನಿರೂಪಿಸಿದರು.


Spread the love

About Laxminews 24x7

Check Also

ಸಿಎಂ ಹುದ್ದೆಯ ರೇಸಿನಿಂದ ಹಿಂದೆ ಸರಿದವರು

Spread the love ಕಳೆದ ವಾರ ವಿದಾನಮಂಡಲ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಕುತೂಹಲಕಾರಿ ವಿಷಯವೊಂದು ಹೊರಬಿತ್ತು.ಅದರ ಪ್ರಕಾರ ಕರ್ನಾಟಕದಲ್ಲಿ ಮತ್ತೊಮ್ಮೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ