ಸಚಿವ ಸಂಪುಟ ರಚನೆ ಸಂಬಂಧ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಗೆ ತೆರಳಿದ್ದಾರೆ. ಮಧ್ಯರಾತ್ರಿವರೆಗೂ ಸಿಎಂ ದೆಹಲಿಯ ಅಜ್ಞಾತ ಸ್ಥಳದಲ್ಲಿದ್ದರು. ಬೆಂಗಾವಲು ಪಡೆ ಬಿಟ್ಟು ಬೊಮ್ಮಾಯಿ ತೆರಳಿದ್ದರು. ಇಂದು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾರನ್ನು ಭೇಟಿಯಾಗಿ ಸಂಪುಟ ರಚನೆ ಬಗ್ಗೆ ಬೊಮ್ಮಾಯಿ ಚರ್ಚಿಸುತ್ತಾರೆ.ದೆಹಲಿಗೆ ತೆರಳಿರುವ ಸಿಎಂ ಬಸವರಾಜ ಬೊಮ್ಮಾಯಿ, ಇಂದು ಸಚಿವರ ಪಟ್ಟಿಯೊಂದಿಗೆ ರಾಜ್ಯಕ್ಕೆ ವಾಪಸ್ ಆಗುವ ಸಾಧ್ಯತೆಯಿದೆ.
