ದೆಹಲಿ : ರಾಜ್ಯದ ಸಚಿವ ಸಂಪುಟ ರಚನೆ ಸಂಬಂಧ ದೆಹಲಿಗೆ ಹೋಗಿರುವ ಸಿಎಂ ಬಸವರಾಜ ಬೊಮ್ಮಾಯಿ ಇಂದು ಬೆಳಗ್ಗೆ 9 ಗಂಟಗೆ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ. ಈ ನಡುವೆ ತಮ್ಮ ಪುತ್ರ ವಿಜಯೇಂದ್ರರಿಗೆ ಸಚಿವ ಸ್ಥಾನ ನೀಡುವಂತೆ ಬಿ.ಎಸ್. ಯಡಿಯೂರಪ್ಪ ಹೈಕಮಾಂಡ್ ಗೆ ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದೆ.
ಸಚಿವ ಸಂಪುಟ ರಚನೆ ಕುರಿತಂತೆ ಈಗಾಗಲೇ ದೆಹಲಿಗೆ ತೆರಳಿರುವ ಸಿಎಂ ಬೊಮ್ಮಾಯಿ ಅವರು ಇಂದು ನೂತನ ಸಚಿವರ ಪಟ್ಟಿಯೊಂದಿಗೆ ರಾಜ್ಯಕ್ಕೆ ವಾಪಸ್ ಆಗಲಿದ್ದಾರೆ ಎನ್ನಲಾಗಿದ್ದು, ಈ ಪಟ್ಟಿಯಲ್ಲಿ ವಿಜಯೇಂದ್ರ ಅವರ ಹೆಸರು ಇದೆ ಎಂದು ಹೇಳಲಾಗುತ್ತಿದೆ. ಬೊಮ್ಮಾಯಿ ಸಂಪುಟದಲ್ಲಿ ಮಂತ್ರಿ ಮಾಡುವಂತೆ ಹೈಕಮಾಂಡ್ ಮೇಲೆ ಯಡಿಯೂರಪ್ಪ ಒತ್ತಡ ಹೇರುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
2023 ವಿಧಾನಸಭೆ ಚುನಾವಣೆಗ ಸಿದ್ಧತೆ ಆರಂಭವಾಗಿದ್ದು, ಜಾತಿ, ಮತ, ಪ್ರಾದೇಶಿಕತೆ, ಸಂಘಟನೆ, ಅನುಭವ ಎಲ್ಲವನ್ನೂ ಅಳೆದು ತೂಗಿ ಸಚಿವ ಸ್ಥಾನಕ್ಕೆ ಹೆಸರನ್ನು ಫೈನಲ್ ಮಾಡಲಾಗಿದೆ ಎನ್ನಲಾಗಿದೆ.