Breaking News
Home / ರಾಜಕೀಯ / ಅಪರಾಧ ಹಿನ್ನೆಲೆಯ ವ್ಯಕ್ತಿಗಳ ಜತೆ ಸಂಪರ್ಕ, ಪೊಲೀಸ್ ಠಾಣೆಯಲ್ಲಿ ಖಾಸಗಿ ಸಂಭ್ರಮಾಚರಣೆಗಳಿಗೆ ಸಂಪೂರ್ಣ ನಿಷೇಧ: ಪ್ರವೀಣ್ ಸೂದ್ ಆದೇಶ

ಅಪರಾಧ ಹಿನ್ನೆಲೆಯ ವ್ಯಕ್ತಿಗಳ ಜತೆ ಸಂಪರ್ಕ, ಪೊಲೀಸ್ ಠಾಣೆಯಲ್ಲಿ ಖಾಸಗಿ ಸಂಭ್ರಮಾಚರಣೆಗಳಿಗೆ ಸಂಪೂರ್ಣ ನಿಷೇಧ: ಪ್ರವೀಣ್ ಸೂದ್ ಆದೇಶ

Spread the love

ಪೊಲೀಸ್ ಇಲಾಖೆಯಲ್ಲಿ ಶಿಸ್ತು ಪಾಲನೆಗೆ ಖಡಕ್ ಆದೇಶ ಹೊರಡಿಸಲಾಗಿದೆ. ರೌಡಿಶೀಟರ್‌ಗಳು, ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳು, ಸಮಾಜಘಾತುಕ ವ್ಯಕ್ತಿಗಳ ಜತೆ ಸಂಪರ್ಕ ಇಟ್ಟುಕೊಳ್ಳಬಾರದು. ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳ ಜತೆ ಭಾಗಿಯಾಗಬಾರದು. ಯಾವುದೇ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗುವುದು ಸೂಕ್ತವಲ್ಲ ಎಂದು ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್‌ ಖಡಕ್ ಆದೇಶ ಹೊರಡಿಸಿದ್ದಾರೆ.

ಪೊಲೀಸರು ಯಾವುದೇ ಕಾರ್ಯಕ್ರಮದಲ್ಲಿ ಭಾಗಿಯಾಗುವುದಕ್ಕೆ ಮುನ್ನ ತಿಳಿದುಕೊಳ್ಳಬೇಕು. ಕಾರ್ಯಕ್ರಮ ಆಯೋಜಿಸಿರುವ ಸಂಸ್ಥೆ, ವ್ಯಕ್ತಿ ಹಿನ್ನೆಲೆ ತಿಳಿಯಬೇಕು ಎಂದು ಪ್ರವೀಣ್ ಸೂದ್‌ ಆದೇಶಿಸಿದ್ದಾರೆ.

ಪೊಲೀಸ್ ಠಾಣೆ, ಸರ್ಕಲ್ ಇನ್ಸ್‌ಪೆಕ್ಟರ್ ಕಚೇರಿ, ಎಸಿಪಿ ಕಚೇರಿಗಳಲ್ಲಿ ಹುಟ್ಟುಹಬ್ಬ, ಮದುವೆ ವಾರ್ಷಿಕೋತ್ಸವ
ಯಾವುದೇ ಖಾಸಗಿ ಕಾರ್ಯಕ್ರಮ ಆಚರಣೆ ಮಾಡುವಂತಿಲ್ಲ ಎಂದು ಅವರು ಹೇಳಿದ್ದಾರೆ. ಅಷ್ಟೇ ಅಲ್ಲದೆ, ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಸ್ವಾಗತ, ಬೀಳ್ಕೊಡುಗೆ ವಿಚಾರವಾಗಿ ಪ್ರತಿಕ್ರಿಯಸಿದ ಅವರು, ಸ್ವಾಗತ, ಬೀಳ್ಕೊಡುಗೆ ಕಾರ್ಯಕ್ರಮಕ್ಕೂ ನಿರ್ಬಂಧ ಹೇರಿ ಆದೇಶ ನೀಡಿದ್ದಾರೆ.

ಕಾರ್ಯಕ್ರಮದಲ್ಲಿ ಪೊಲೀಸ್ ಸಿಬ್ಬಂದಿ ಮಾತ್ರ ಇರಬೇಕು. ಸಭೆ, ಸಮಾರಂಭಕ್ಕೆ ನೇರವಾಗಿ ಹಣ ಸಂಗ್ರಹ ಮಾಡುವಂತಿಲ್ಲ. ಹಿರಿಯ ಅಧಿಕಾರಿ ಅನುಮತಿ ಇಲ್ಲದೆ ಹಣ ಸಂಗ್ರಹಿಸಬಾರದು. ಎಲ್ಲ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸೂಚನೆ ಕೊಟ್ಟಿದ್ದಾರೆ. ಎಲ್ಲಾ ಅಂಶಗಳನ್ನ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಘಟಕಾಧಿಕಾರಿಗಳಿಗೆ ಡಿಜಿಪಿ ಪ್ರವೀಣ್ ಸೂದ್ ಸೂಚನೆ ನೀಡಿದ್ದಾರೆ.


Spread the love

About Laxminews 24x7

Check Also

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಜೋಶಿ

Spread the love ಹುಬ್ಬಳ್ಳಿ : ಮುಸ್ಲಿಂ ಮೀಸಲಾತಿ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಳ್ಳು ಹೇಳುತ್ತಿದ್ದಾರೆ. ಸುಳ್ಳು ಹೇಳುವುದರಲ್ಲಿ ಅವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ