ದಾವಣಗೆರೆ: ಮಾಜಿ ಸಿಎಂ ಯಡಿಯೂರಪ್ಪ ಅವರು ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನ ಅಭಿವೃದ್ದಿಗೆ ಸಾವಿರಾರು ಕೋಟಿ ನೀಡಿದ್ದಾರೆ ಎಂದು ಹೇಳುತ್ತಲೆ ಶಾಸಕ ಎಂ.ಪಿ. ರೇಣುಕಾಚಾರ್ಯ ಭಾವುಕರಾಗಿದ್ದಾರೆ.
ಹೊನ್ನಾಳಿ ನಗರದ ಸಾಮರ್ಥ್ಯ ಸೌಧದಲ್ಲಿ ಅತಿವೃಷ್ಟಿಯಿಂದಾದ ಹಾನಿಯ ಬಗ್ಗೆ ನಡೆಯುತ್ತಿರುವ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ರೇಣುಕಾಚಾರ್ಯ ಅವಳಿ ತಾಲ್ಲೂಕಿನ ಅಭಿವೃದ್ಧಿಗೆ ಯಡಿಯೂರಪ್ಪ ಅವರ ಕೊಡುಗೆ ಅಪಾರವಾಗಿದೆ. ಅವರು ಸಾವಿರಾರು ಕೋಟಿ ಅನುದಾನ ನೀಡಿದ್ದರಿಂದಲೇ ತಾಲ್ಲೂಕು ಅಭಿವೃದ್ಧಿ ಕಂಡಿದೆ ಎಂದು ಹೇಳುತ್ತಲೆ ಭಾವುಕರಾದರು.
ಅವಳಿ ತಾಲೂಕಿಗೆ ಯಡಿಯೂರಪ್ಪ ನೀಡಿದ ಕೊಡುಗೆ ಅಪಾರವಾಗಿದ್ದು, ಅವರು ನೀಡಿದ ಕೊಡುಗೆಯನ್ನು ಜೀವನದಲ್ಲಿ ಮರೆಯಲು ಸಾಧ್ಯವಿಲ್ಲಾ ಎಂದು ಭಾವುಕರಾದರು.
Laxmi News 24×7