Breaking News

ರಾಜ್ಯಾದ್ಯಂತ ಇನ್ನೂ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

Spread the love

ಬೆಂಗಳೂರು: ಮಹಾ ಮಳೆಗೆ ಈಗಾಗಲೇ ರಾಜ್ಯದ ಬಹುತೇಕ ಭಾಗಗಳಲ್ಲಿ ನೆರೆ ಸಂಭವಿಸಿದ್ದು, ಇದೀಗ ಹವಾಮಾನ ಇಲಾಖೆ ಇನ್ನೂ ಮೂರು ದಿನ ಭಾರೀ ಮಳೆಯಾಗಲಿದೆ ಎಂಬ ಆಘಾತಕಾರಿ ಮಾಹಿತಿ ನೀಡಿದೆಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಆಗಸ್ಟ್ 13 ರವರೆಗೆ ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ. ಅಲ್ಲದೆ ಉತ್ತರ ಒಳನಾಡಿನಲ್ಲಿ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲೂ ಆಗಸ್ಟ್ 9 ರಿಂದ 13ರವರೆಗೆ ವರುಣ ಅಬ್ಬರಿಸಲಿದ್ದಾನೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಹೆಚ್ಚು ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ಎಚ್ಚರಿಕೆ ನೀಡಿದ್ದಾರೆ.

ಇಂದು ರೆಡ್ ಅಲರ್ಟ್ ಘೋಷಿಸಲಾಗಿದ್ದು, ಆಗಸ್ಟ್ 10 ರಂದು ಮಲೆನಾಡು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಸಹ ಆಗಸ್ಟ್ 9 ಹಾಗೂ 10 ರಂದು 2 ದಿನ ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.


Spread the love

About Laxminews 24x7

Check Also

ಸವದತ್ತಿ: ಮನೆಯಿಂದ ನಾಪತ್ತೆಯಾಗಿದ್ದ ಮಹಿಳೆ ನದಿಗೆ ಹಾರಿ ಸಾವು

Spread the loveಸವದತ್ತಿ: ಮನೆಯಿಂದ ನಾಪತ್ತೆಯಾಗಿದ್ದ ಸ್ಥಳೀಯ ನಿವಾಸಿ ವಜ್ರವ್ವ ಮಲ್ಲಿಕಾರ್ಜುನ ಉಪ್ಪಾರಟ್ಟಿ (58) ಮೃತದೇಹ ಮಂಗಳವಾರ ಜೋಗುಳಬಾವಿ ಸಮೀಪದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ