ಹುಬ್ಬಳ್ಳಿ: ಶಾಸಕ ಅರವಿಂದ ಬೆಲ್ಲದ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಅಭಿಮಾನಿಯೊಬ್ಬರು ದೀರ್ಘದಂಡ ನಮಸ್ಕಾರ ಸಲ್ಲಿಸಿದರು.
ಇಲ್ಲಿನ ಶ್ರೀ ಸಿದ್ಧಾರೂಢ ದೇವಸ್ಥಾನದಲ್ಲಿ ಬೆಲ್ಲದ ಅಭಿಮಾನಿ ರಾಘು ಹಿರೇಗೌಡರ ಎನ್ನವವರು ದೀರ್ಘ ದಂಡ ನಮಸ್ಕಾರ ಸೇವೆ ಸಲ್ಲಿಸಿದರು. ನಂತರ ವಿಶೇಷ ಪೂಜೆ ಸಲ್ಲಿಸಿ ಬೆಲ್ಲದ ಅವರಿಗೆ ಸಚಿವ ಸ್ಥಾನ ಸಿಗಲಿ ಎಂದು ಪ್ರಾರ್ಥನೆ ಮಾಡಿದರು. ಅರವಿಂದ ಬೆಲ್ಲದ ಅವರು ಈ ಭಾಗದ ಅಭಿವೃದ್ಧಿಗೆ ಸೂಕ್ತ ವ್ಯಕ್ತಿಯಾಗಿದ್ದಾರೆ.
ವಿಶೇಷ ಹಾಗೂ ವಿನೂತನ ಯೋಜನೆಗಳನ್ನು ಮಹಾನಗರಕ್ಕೆ ಪರಿಚಯಿಸಿದ್ದಾರೆ. ಈ ಭಾಗದ ಅಭಿವೃದ್ಧಿ ಹಾಗೂ ಪಕ್ಷದ ಸಂಘಟನೆ ದೃಷ್ಟಿಯಿಂದ ಬೆಲ್ಲದ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಬೆಲ್ಲದ ಪರ ಘೋಷಣೆ ಕೂಗಿದರು
Laxmi News 24×7