Breaking News

ಮೃತ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ನೆರವು ನೀಡಿದ ಬಿಎಸ್‌ವೈ

Spread the love

ಗುಂಡ್ಲುಪೇಟೆ: ಸಿಎಂ ಸ್ಥಾನಕ್ಕೆ ತಾವು ರಾಜೀನಾಮೆ ನೀಡಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಬೊಮ್ಮಲಾಪುರ ರವಿ ಅವರ ಕುಟುಂಬದವರಿಗೆ ಯಡಿಯೂರಪ್ಪ ಅವರು ಶುಕ್ರವಾರ ಸಾಂತ್ವನ ಹೇಳಿ ವೈಯಕ್ತಿಕವಾಗಿ 5 ಲಕ್ಷ ರೂ. ನೆರವು ನೀಡಿದರು.

ರವಿ ಮನೆಗೆ ಶುಕ್ರವಾರ ಭೇಟಿ ನೀಡಿ ಕುಟುಂಬದವರಿಗೆ ಯಡಿಯೂರಪ್ಪ ಸಾಂತ್ವನ ಹೇಳಿದರು. ಮನೆಯವರು ಸಂಕಷ್ಟದಲ್ಲಿರುವುದನ್ನು ಅರಿತು ಮನೆ ನಿರ್ಮಾಣಕ್ಕೂ ಮುಂದೆ 5 ಲಕ್ಷ ರೂ. ನೆರವು ನೀಡುವುದಾಗಿ ಭರವಸೆ ನೀಡಿದರು.

ಗುಂಡ್ಲುಪೇಟೆಗೆ ಹೆಲಿಕಾಪ್ಟರ್ ಮುಖಾಂತರ ಆಗಮಿಸಿದ್ದ ಬಿಎಸ್‌ವೈ ಅವರೊಂದಿಗೆ ಪುತ್ರ ಬಿ.ವೈ.ವಿಜಯೇಂದ್ರ, ಶಾಸಕರಾದ ಸಿ.ಎಸ್.ನಿರಂಜನ್ ಕುಮಾರ್, ಎನ್.ಮಹೇಶ್, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಎಸ್.ಆರ್.ವಿಶ್ವನಾಥ್, ಕಾ.ಪು.ಸಿದ್ದಲಿಂಗಸ್ವಾಮಿ ಮೊದಲಾದವರಿದ್ದರು.


Spread the love

About Laxminews 24x7

Check Also

ಉಪಚುನಾವಣೆಯಲ್ಲಿ ಮೇಟಿ ಕುಟುಂಬದವರಿಗೆ ಟಿಕೆಟ್

Spread the loveಬೆಳಗಾವಿ: ‘ಕಾಂಗ್ರೆಸ್ ಶಾಸಕ ಎಚ್‌.ವೈ. ಮೇಟಿ ನಿಧನದಿಂದ ತೆರವಾಗಿರುವ ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ನಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ